ಜನಸಾಮಾನ್ಯರಿಗೂ ಸಹ ಸರ್ಕಾರಿ ಕಚೇರಿಗಳ ಕಾರ್ಯ ನಿರ್ವಹಣೆ ಕುರಿತು ಅರಿವು ಇರಲಿ ಎಂಬ ಕಾರಣಕ್ಕಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ ಕೆಲವರು ಇದನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಇಂಥವುದೇ ಒಂದು ಪ್ರಕರಣದಲ್ಲಿ 9 ಮಂದಿ ಮಾಹಿತಿ ಹಕ್ಕು ಕಾಯ್ದೆ ಅಡಿ ಪುನರಾವರ್ತಿತ ಪ್ರಶ್ನೆಗಳನ್ನು ಕೇಳಿ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು ಹೀಗಾಗಿ ಇವರುಗಳನ್ನು ಗುಜರಾತ್ ಮಾಹಿತಿ ಆಯೋಗವು ಕಪ್ಪು ಪಟ್ಟಿಗೆ ಸೇರಿಸಿದೆ. ಅಲ್ಲದೆ ಇವರು ಕೇಳುವ ಅರ್ಜಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ಆದರೆ ಗುಜರಾತ್ ಮಾಹಿತಿ ಆಯೋಗದ ಈ ಕ್ರಮಕ್ಕೆ ಕೇಂದ್ರ ಮಾಹಿತಿ ಆಯೋಗ ವ್ಯತಿರಿಕ್ತ ಅಭಿಪ್ರಾಯ ನೀಡಿದ್ದು, ಈ ರೀತಿ ಜೀವಮಾನವಿಡಿ ನಿಬಂಧನೆ ಹೇರುವ ಯಾವುದೇ ನಿಯಮ ಅಸ್ತಿತ್ವದಲ್ಲಿಲ್ಲ ಎಂದು ತಿಳಿಸಿದೆ. ಸರ್ಕಾರೇತರ ಸಂಸ್ಥೆಯೊಂದು ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ ಪ್ರಶ್ನೆಗೆ ಈ ಉತ್ತರ ಸಿಕ್ಕಿದೆ.