ಮಧುಗಿರಿ : ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕಾಮುಕ ಶಿಕ್ಷಕನೋರ್ವನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ದೊಡ್ಡದಾಳವಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕ ಎ ಆರ್ ಸಂಜೀವಮೂರ್ತಿ ಅವರನ್ನು ಬುಧವಾರ ಕೊಡಿಗೇನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಾನೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವಿದ್ಯಾರ್ಥಿನಿಯರು ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು. ನಂತರ ಸಂಜೀವಮೂರ್ತಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿತ್ತು.