ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ಹಾಗೂ ಹೈಕೋರ್ಟ್ ಧಾರವಾಡ ಪ್ರವೇಶವನ್ನು ನಿರಾಕರಿಸಿ ಆದೇಶ ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾ. ಎಂ ತ್ರಿವೇದಿ ವಿಚಾರಣೆಯನ್ನು ನಡೆಸಿ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಸೂಚಿಸಿದೆ ಎಂದು ತಿಳಿದುಬಂದಿದೆ.
2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಕಾರಣಗಳನ್ನು ನಮೂದಿಸಿ ಇತ್ತೀಚಿಗೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.