![](https://kannadadunia.com/wp-content/uploads/2024/03/WhatsApp-Image-2024-03-05-at-2.32.54-PM.jpeg)
ಬೆಂಗಳೂರು : ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಬರಗಾಲವಿದೆ. 194 ತಾಲೂಕುಗಳಲ್ಲಿ ತೀವ್ರ ಬರಗಾಲ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.
ಬರ ನಿರ್ವಾಹಣೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ 194 ತಾಲೂಕುಗಳಲ್ಲಿ ತೀವ್ರ ಬರಗಾಲಿವೆ. ಕುಡಿಯು ನೀರಿಗೆ ತೊಂದರೆ ಆಗದಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬರ ಪ್ರದೇಶಗಳಲ್ಲಿ ಕುಡಿಯು ನೀರು ಪೂರೈಸಲು ಎಷ್ಟೇ ಹಣ ಬೇಕಿದ್ದರೂ ಸರ್ಕಾರ ಕೊಡುತ್ತದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲಿ 854 ಕೋಟಿ ರೂ. ಇದೆ. ಬರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗಿದೆ ಎಂದು ಹೇಳಿದ್ದಾರೆ.