ಮಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕು. ಕೋರ್ಟ್ ತೀರ್ಪಿಗೆ ತಲೆಬಾಗಿ ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಮುಸ್ಲಿಂ ಧರ್ಮಗುರುಗಳು ವಿದ್ಯಾರ್ಥಿನಿಯರಿಗೆ ಕರೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸಭೆ ನಡೆಸಿದ ಮುಸ್ಲಿಂ ಧರ್ಮಗುರುಗಳು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಸಧ್ಯಕ್ಕೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಿ ಹಿಜಾಬ್ ತೆಗೆದು ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುವಂತೆ ಮನವಿ ಮಾಡಿದ್ದಾರೆ.
ಅನಗತ್ಯವಾಗಿ ರಾಜ್ಯ ಸರ್ಕಾರದ ಜತೆ ಸಂಘರ್ಷ ಬೇಡ. ಕೋಮು ಸೌಹಾರ್ದ ಹದಗೆಡಿಸುವ ಯತ್ನ ಮಾಡಬಾರದು. ಪೋಷಕರು ಮಕ್ಕಳ ವಿದ್ಯಾಭ್ಯಾಸ, ಪರೀಕ್ಷೆಗಳತ್ತ ಗಮನ ಕೊಡಬೇಕು. ಕೋರ್ಟ್ ಹಾಗೂ ಸರ್ಕಾರದ ಜತೆ ಸಂಘರ್ಷ ಮಾಡುವುದು ಬೇಡ. ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಹಂತ ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಕಿವಿಮಾತು ಹೇಳಿದ್ದಾರೆ.