ಬೆಂಗಳೂರು: 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸಹಾಯವಾಣಿ ಆರಂಭವಾಗಿದೆ.
ಇಂದು ಮಧ್ಯಾಹ್ನ 12:30ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖಾ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು karresults.nic.in ಅಥವಾ http://kseeb.kar.nic.inಗೆ ಭೇಟಿ ನೀಡಬಹುದು.
ಇಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭಿಸಿದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.