alex Certify BIG NEWS : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ; ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ; ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆ ಇಂದಿನಿಂದ ವಿಧಾನಸೌಧದದ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿಯಲ್ಲಿರಲಿದೆ.

ಫೆ. 12-02-2024 ರಿಂದ ದಿನಾಂಕ: 23-02-2024 ರವರೆಗೆ ಪ್ರತಿದಿನ ಬೆಳಿಗ್ಗೆ 06-00 ಗಂಟೆಯಿಂದ ಮಧ್ಯರಾತ್ರಿ 12-00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂಪಾರ್ಕ್ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಯಾವುದಕ್ಕೆ ನಿಷೇಧ..?
1.ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಿದೆ.
2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
4. ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು. ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು. ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...