ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭಾರಿ ಕೇಳಿಬಂದಿದ್ದ 40 % ಕಮಿಷನ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ್ಯಾ|ನಾಗಮೋಹನ್ ದಾಸ್ ಸಮಿತಿ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಲಾಗಿದೆ.
ಈ ಸಂಬಂಧ 30 ದಿನದೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದೆ.ಬಿಜೆಪಿ ಆಡಳಿತಾವಧಿಯಲ್ಲಿನ ಹಲವು ಅಕ್ರಮ ಆರೋಪ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 40 % ಕಮಿಷನ್ ತನಿಖೆಗೆ ಆದೇಶ ಹೊರಡಿಸಿದ ಸರ್ಕಾರ 9 ಅಂಶಗಳ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ತನಿಖಾ ಸಮಿತಿಯು ಸ್ಥಳ ಪರಿಶೀಲನೆ ವೇಳೆ ಖುದ್ದು ಹಾಜರಿದ್ದು, ತನಿಖೆಗೆ ಸಹಕಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ , ಅಗತ್ಯವಿರುವ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಹಾಗೂ ಆಡಳಿತಾತ್ಮಕ ಸಲಹೆಗಾರರನ್ನು ತೆಗೆದುಕೊಳ್ಳಬಹುದು ಎಂದು ಸಮಿತಿಗೆ ಆದೇಶದಲ್ಲಿ ತಿಳಿಸಿದೆ.
ತನಿಖೆ ನಡೆಸುವ ಧೈರ್ಯವಿಲ್ಲವೇ..?
ಮಾನ್ಯ ನರೇಂದ್ರ ಮೋದಿ ಅವರೇ, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಿಮ್ಮದೇ ಪರಿವಾರ ಆರೋಪಗಳನ್ನು ಮಾಡತೊಡಗಿದೆ. ‘ಪಿಎಂ ಕೇರ್ಸ್ ಫಂಡ್’ ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ ಹಣವನ್ನು ದಾನವಾಗಿ ನೀಡುತ್ತಿದ್ದಾರೆ. ಆದರೆ, ನಿಮ್ಮ ಸರ್ಕಾರ ಅದನ್ನು ಸಾರ್ವಜನಿಕ ದತ್ತಿ ಟ್ರಸ್ಟ್ ಎಂದು ಹೆಸರಿಸಿ ಅದನ್ನು ಮಾಹಿತಿ ಹಕ್ಕಿನಿಂದ ಹೊರಗಿರಿಸಿರಿದೆ. ಈ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ ಹೇಳಬಲ್ಲಿರಾ?
ಮಾನ್ಯ ನರೇಂದ್ರ ಮೋದಿ ಅವರೇ, ನೀವು I.N.D.I.A ಒಕ್ಕೂಟವನ್ನು ಭ್ರಷ್ಟರ ಒಕ್ಕೂಟವೆಂದು ಸುಳ್ಳು ಆರೋಪ ಹೊರಿಸಿ ಸಂಭ್ರಮಿಸುತ್ತೀರಿ, ನಿಮ್ಮದೇ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಿಎಜಿ ವರದಿಯು ಬಟಾಬಯಲು ಮಾಡಿದ್ದರೂ ಕಣ್ಣು, ಬಾಯಿಮುಚ್ಚಿ ಕೂತಿದ್ದೀರಿ. ಇದು ಆತ್ಮವಂಚಕ ನಡವಳಿಕೆ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಅವರೇ, ದಿಲ್ಲಿ-ಗುರುಗ್ರಾಮ ಗಡಿಯಲ್ಲಿರುವ ದ್ವಾರಕಾ ಎಕ್ಸ್ ಪ್ರೆಸ್ ವೇ ಯೋಜನೆಯಲ್ಲಿ ಅಕ್ರಮ ನಡೆದಿರುವ ವರದಿಗಳಿವೆ. ಪ್ರತಿ ಕಿ.ಮೀ.ಗೆ 18.2 ಕೋಟಿ ರೂ.ಗಳಿಂದ 251 ಕೋಟಿ ರೂ.ಗಳ ವರಗೆ ನಿರ್ಮಾಣ ವೆಚ್ಚವನ್ನು ಅವೈಜ್ಞಾನಿಕ ರೀತಿಯಲ್ಲಿ ಏರಿಸಲಾಗಿರುವ ಆರೋಪಗಳಿವೆ. ಈ ಬಗ್ಗೆ ಸಮಗ್ರ ರೂಪದ ತನಿಖೆಯ ಅಗತ್ಯ ಇದೆ ಎಂದು ನಿಮಗೆ ಅನಿಸುವುದಿಲ್ಲವೇ..? ತನಿಖೆ ನಡೆಸುವ ಧೈರ್ಯವಿಲ್ಲವೇ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.