alex Certify BIG NEWS : 60 ಲಕ್ಷ ‘BPL ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ : ಆರ್ .ಅಶೋಕ್ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : 60 ಲಕ್ಷ ‘BPL ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ : ಆರ್ .ಅಶೋಕ್ ಹೊಸ ಬಾಂಬ್

ಬೆಂಗಳೂರು : 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಅಕ್ರಮ ಬಿಪಿಎಲ್ ಕಾರ್ಡ್ ದಾರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಮುಂದಾಗಿದ್ದು, ಈ ನಡುವೆ ಆರ್ .ಅಶೋಕ್ ಹೇಳಿಕೆ ಮಹತ್ವ ಪಡೆದಿದೆ.

ಸಿದ್ದರಾಮಯ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ತೆರಿಗೆ ಹೆಚ್ಚಳ ಮಾಡಿದ್ರೂ ಸಂಬಳ ಕೊಡೋಕೆ ಆಗುತ್ತಿಲ್ಲ. ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಪಾರಾಗಲು 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ : ಅಶೋಕ್

ಅವೈಜ್ಞಾನಿಕ ಗ್ಯಾರೆಂಟಿಗಳು, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಅಕ್ಷರಶಃ ಪಾಪರ್ ಆಗಿರುವ
CONGRESS ಸರ್ಕಾರ ವರಮಾನ ಸಂಗ್ರಹಕ್ಕೆ ನಾನಾ ಮಾರ್ಗಗಳನ್ನ ಹುಡುಕಲು ಹೊರಟಿದೆ. ಸಂಪನ್ಮೂಲ ಕ್ರೋಢೀಕರಣಕ್ಕೆ ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ (BCG) ಎಂಬ ವಿದೇಶಿ ಕಂಪನಿಗೆ ಹತ್ತಾರು ಕೋಟಿ ಸಂಭಾವನೆ ಕೊಟ್ಟು ಈಗಾಗಲೇ ಪ್ರಾಥಮಿಕ ವರದಿ ಪಡೆದಿರುವ ಕಾಂಗ್ರೆಸ್ ಸರ್ಕಾರ, ಈಗ ಮತ್ತೊಂದು ತಜ್ಞರ ಸಮಿತಿ ನೇಮಕ ಮಾಡಿದೆ. ಸಿಎಂ siddaramaiah ನವರೇ, ‘ಕೂತು ತಿನ್ನುವವನಿಗೆ ಕುಡಿಕೆ ಹೊನ್ನೂ ಸಾಲದು’ ಎಂಬಂತೆ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ತಾನಾಗಿಯೇ ಸಂಪನ್ಮೂಲ ಕ್ರೂಢೀಕರಣ ಹೆಚ್ಚಳ ಆಗಬೇಕು ಅಂದರೆ ಅದು ಹೇಗೆ ಸಾಧ್ಯ? ಮೂಲಸೌಕರ್ಯ ವೃದ್ಧಿಸಿ, ಬಂಡವಾಳ ಹೂಡಿಕೆಗೆ ಸೂಕ್ತ ವಾತಾವರಣ ನಿರ್ಮಿಸಿ, ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿದರೆ ಸರ್ಕಾರದ ವರಮಾನ ತಾನಾಗಿಯೇ ಹೆಚ್ಚಳ ಆಗುತ್ತದೆ.

15 ಬಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ತಮಗೆ ಇಷ್ಟಾದರೂ ಸಾಮಾನ್ಯ ಜ್ಞಾನ ಇರಬೇಕಲ್ಲವೇ? ಕುರ್ಚಿ ಉಳಿಸಿಕೊಳ್ಳಲು ದಿನದ 24 ಗಂಟೆಯೂ, ವರ್ಷದ 365 ದಿನವೂ ಬರೀ ರಾಜಕೀಯದಲ್ಲಿ ಮಾಡಿಕೊಂಡು ಕಾಲಹರಣ ಮಾಡಿದರೆ ರಾಜ್ಯದ ಪ್ರಗತಿಯೂ ಆಗುವುದಿಲ್ಲ, ಸರ್ಕಾರದ ಆದಾಯವೂ ಹೆಚ್ಚಳ ಆಗುವುದಿಲ್ಲ. ವಿದೇಶಿ ಕಂಪನಿಗಳಿಗೆ, ತಜ್ಞರ ಸಮಿತಿಗಳಿಗೆ ಹತ್ತಾರು ಕೋಟಿ ಖರ್ಚು ಮಾಡಿ ಸಾರ್ವಜನಿಕರ ಹಣ ಪೋಲು ಮಾಡುವ ಬದಲು ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಿ. ನಿಮ್ಮ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...