![](https://kannadadunia.com/wp-content/uploads/2024/01/Ambigara-choudayya.jpg)
ಬೆಂಗಳೂರು : ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದು ಘೋಷಿಸಿದ್ದು, ಬೆಂಗಳೂರಿನಲ್ಲೇ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ನಿಜಶರಣ ಅಂಬಿಗರ ಚೌಡಯ್ಯ ಅವರ ಪ್ರತಿಮೆಯ ಸ್ಥಾಪನೆಗೆ ಈಗಾಗಲೇ ಕೆಲವು ಸ್ಥಳಗಳ ಪರಿಶೀಲನೆ ನಡೆಸಲಾಗಿದೆ. ಸೂಕ್ತ ಸ್ಥಳ ಗುರುತಿಸಿದ ಕೂಡಲೇ ಪ್ರತಿಮೆಯ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.