alex Certify BIG NEWS : ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ : ರಾಜ್ಯಪಾಲ ಗೆಹಲೋತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ : ರಾಜ್ಯಪಾಲ ಗೆಹಲೋತ್

ಬೆಂಗಳೂರು :  ರಾಜ್ಯ ಸರ್ಕಾರವು ಮೇಕೆದಾಟು, ಕೃಷ್ಣಾ ಮೇಲ್ದಂಡ ಸೇರಿದಂತೆ ಇನ್ನಿತರ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೇಕೆದಾಟು ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಪೂರ್ವಭಾವಿ ಸಿದ್ಧತೆ ಆರಂಭಿಸಲಾಗಿದೆ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್‌ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಐತಿಹಾಸಿಕ ದಿನದಂದು ಭಾರತದ ಸಂವಿಧಾನವು ಜಾರಿಗೆ ಬಂದಿತು. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧೈಯವನ್ನು ಹೊಂದಿದೆ. ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ  ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ನನ್ನ ಸರ್ಕಾರ ಶ್ರಮಿಸುತ್ತಿದೆ ಎಂದರು.

ನನ್ನ ಸರ್ಕಾರವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ಎಲ್ಲಾ ಐದು ಗ್ಯಾರಂಟಿಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ನಾವು ರಾಜ್ಯದಲ್ಲಿ ಅನುಷ್ಠಾನಗೊಳಿಸಿರುತ್ತೇವೆ ಎಂದು ಹರ್ಷಿಸುತ್ತೇನೆ ಎಂದು ತಿಳಿಸಿದರು.

ಜೂನ್ 11, 2023, ರಂದು ಮಹತ್ವಾಕಾಂಕ್ಷಿ  ಯೋಜನೆಯಾದ “ಶಕ್ತಿ ಯೋಜನೆ”-“ಮಹಿಳೆಯರಿಗೆ ಉಚಿತ ಪ್ರಯಾಣ”ವನ್ನು ಜಾರಿಗೊಳಿಸಿ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಯಿಟ್ಟಿದೆ. ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿನಿಯರು ಸೇರಿದಂತೆ, ರಾಜ್ಯದ 3.5 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ  ಯೋಜನೆ ಪ್ರಾರಂಭವಾದಂದಿನಿಂದ ಇಲ್ಲಿಯವರೆಗೆ 134.34 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿಯೋಜನೆಯಡಿ ಪ್ರಯಾಣ ಮಾಡಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 5ಕೆ.ಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ಫಲಾನುಭವಿಗೆ 10ಕೆ.ಜಿ ಆಹಾರಧಾನ್ಯವನ್ನು ವಿತರಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆ. ಪ್ರಸ್ತುತ ಈ ಯೋಜನೆಗೆ ಅಗತ್ಯವಿರುವ ಆಹಾರ ಧಾನ್ಯ ಲಭ್ಯವಾಗುವವರೆಗೆ ರಾಜ್ಯದ ಅರ್ಹ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಹೆಚ್ಚುವರಿ 5ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34/-ರಂತೆ ಕುಟುಂಬದ ಸದಸ್ಯರುಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ. ಜುಲೈ 2023  ಮಾಹೆಯಿಂದ ನವೆಂಬರ್ 2023ರ ಅಂತ್ಯಕ್ಕೆ ಒಟ್ಟು ರೂ.2900.12 ಕೋಟಿ ಮೊತ್ತದ ಹಣವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.

ದಿನಾಂಕ: 01.07.2023ರಿಂದ ಜಾರಿಗೆ ಬರುವಂತೆ “ಗೃಹಜ್ಯೋತಿ” ಯೋಜನೆಯನ್ನು ಜಾರಿಗೊಳಿಸಿ, ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ 200 ಯೂನಿಟ್‌ಗಳ ಗರಿಷ್ಠ ಬಳಕೆಯ ಮಿತಿಗೆ ಒಳಪಟ್ಟು ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ನಾಡಿನ 1.50ಕೋಟಿ ಗ್ರಾಹಕರು ಯೋಜನೆಯ ಸದುಪಯೋಗ ಪಡೆಯುತ್ತಿದ್ದು, ಸರ್ಕಾರವು ಪ್ರತಿ ತಿಂಗಳೂ ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ de.700 ಕೋಟಿಗಳ ಸಹಾಯಧನವನ್ನು ಬಿಡುಗಡೆ ಮಾಡುತ್ತಿದೆ.

ರಾಜ್ಯದಲ್ಲಿರುವ ಪುತಿ ಕುಟುಂಬದಲ್ಲಿನ ಅರ್ಹ ಯಜಮಾನಿಗೆ ಪ್ರತಿ ತಿಂಗಳು ರೂ.2,000/- ಗಳನ್ನು ನೀಡುವ “ಗೃಹಲಕ್ಷ್ಮಿ” ಯೋಜನೆಯಡಿ ರೂ 17500 ಕೋಟಿ ಅನುದಾನವನ್ನು ನಿಗದಿ  ಪಡಿಸಲಾಗಿದೆ. ಈ ಯೋಜನೆಯಡಿ ನೋಂದಾಯಿಸಿ ಕೊಂಡಿರುವ 1.17 ಕೋಟಿ ಮಹಿಳಾ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಈವರೆಗೆ ರೂ.8181.00 ಕೋಟಿ ನೆರವು ವರ್ಗಾಯಿಸಲಾಗಿದೆ.

 “ಯುವನಿಧಿ ಯೋಜನೆಯಡಿ 2022-23 ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರು ಮತ್ತು ಡಿಪ್ಲೋಮಾ ಹೊಂದಿದವರು 180 ದಿನಗಳು ಪೂರ್ಣಗೊಂಡರೂ ಉದ್ಯೋಗವನ್ನು ಪಡೆಯದೆ ಇದ್ದರೆ ಕ್ರಮವಾಗಿ ಮಾಸಿಕ ರೂ.3000/- ಮತ್ತು ರೂ.1500/- ಗಳ ನಿರುದ್ಯೋಗ ಭತ್ಯೆಯನ್ನು ಎರಡು ವರ್ಷದ ಅವಧಿಗೆ ಅಥವಾ ಎರಡು ವರ್ಷದೊಳಗೆ ಉದ್ಯೋಗ ಪಡೆಯುವವರೆಗೆ ಪಾವತಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ ಜಯಂತಿಯಂದು ರಾಷ್ಟ್ರೀಯ ಯುವ ದಿನಾಚರಣೆ ಸಂದರ್ಭದಲ್ಲಿ ಅನುಷ್ಠಾನಗೊಳಿಸಲಾಗಿದೆ.

ಹೀಗಾಗಿ, ನನ್ನ ಸರ್ಕಾರವು ನೀಡಿದ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಬದ್ಧತೆಯನ್ನು ಮೆರೆದಿದೆ.

ಬರ ಕೈಪಿಡಿ 2020 ರಲ್ಲಿ ನಿರೂಪಿಸಲಾದ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರಕಾರ, ರಾಜ್ಯದ 236 ತಾಲ್ಲೂಕುಗಳ ಪೈಕಿ, 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ಅದರಲ್ಲಿ 196 ತಾಲ್ಲೂಕುಗಳನ್ನು ತೀವು ಬರ ಪೀಡಿತ ಎಂದು ವರ್ಗೀಕರಿಸಲಾಗಿದೆ.

195 ಬರ ಪೀಡಿತ ತಾಲ್ಲೂಕುಗಳಲ್ಲಿ ಬರ ಪರಿಹಾರ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವು NDRF ನಿಂದ ಅನುದಾನವನ್ನು ಕೋರಿದೆ.

ರೈತರ ಸಂಕಷ್ಟವನ್ನು ನಿವಾರಿಸಲು ಬರಗಾಲ ಘೋಷಿತ ತಾಲ್ಲೂಕುಗಳಲ್ಲಿ ಪ್ರತಿ ರೈತನಿಗೆ ರೂ.2000/- ವರೆಗಿನ ಇನ್‌ಪುಟ್ ಸಬ್ಸಿಡಿಯನ್ನು ಮಧ್ಯಂತರ ಪರಿಹಾರವಾಗಿ ಆಧಾರ್ ಲಿಂಕ್ ಮಾಡಲಾದ ರೈತರ ಬ್ಯಾಂಕ್ ಖಾತೆಗೆ రాజ్య ಸರ್ಕಾರದಿಂದ ನೇರವಾಗಿ ಬಿಡುಗಡೆ ಮಾಡಲಾಗುತ್ತಿದೆ. ಸುಮಾರು 30 ಲಕ್ಷ ರೈತರಿಗೆ ರೂ.580 ಕೋಟಿ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ನಿರ್ವಹಣೆಗೆ ಹಾಗೂ ಬರ ಪರಿಹಾರ ಕ್ರಮಗಳ ಮೇಲ್ವಿಚಾರಣೆಗಾಗಿ ಮಾನ್ಯ ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಕಾರ್ಯಪಡೆಗಳನ್ನು ರಚಿಸಲಾಗಿದೆ. ಬರ ಪರಿಸ್ಥಿತಿಯ ಪರಿಣಾಮಗಳನ್ನು ತಗ್ಗಿಸಲು ಹಾಗೂ ಜನ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಬೆಳೆ ಸಮೀಕ್ಷೆ ಕಾರ್ಯಕ್ರಮವು ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023-24ನೇ ಸಾಲಿನಲ್ಲಿ ಒಟ್ಟು 268.00 ಲಕ್ಷ ತಾಕುಗಳ ಪೈಕಿ 259.57 ಲಕ್ಷ ತಾಕುಗಳ ಸಮೀಕ್ಷೆಯನ್ನು ಕೈಗೊಂಡು ಶೇ.96.85 ರಷ್ಟು ಪ್ರಗತಿ ಸಾಧಿಸಲಾಗಿದೆ.

ರೈತಸಿರಿ ಯೋಜನೆಯಡಿ, ಬೆಳೆ ಸಮೀಕ್ಷೆ ಆಧರಿಸಿ ಸಿರಿಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ರೂ.10,000 ದಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ DBT ಮೂಲಕ ಪ್ರೋತ್ಸಾಹಧನವನ್ನು ಹಾಗೂ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಯಂತ್ರೋಪಕರಣಗಳಿಗೆ ಶೇ.50 ಅಥವಾ ಗರಿಷ್ಠ ರೂ.10.00 ಲಕ್ಷಗಳವರೆಗೆ ಸಹಾಯಧನವನ್ನು ನೀಡಲಾಗುತ್ತಿದೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ2023ರ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ವೈಫಲ್ಯದಡಿ ಮತ್ತು ಮಧ್ಯಂತರ ಬೆಳೆ ವಿಮೆ ಪರಿಹಾರದಡಿ ಇಲ್ಲಿಯವರೆಗೆ 6.77 ಲಕ್ಷ ರೈತ ಫಲಾನುಭವಿಗಳಿಗೆ ರೂ.459.59 ಕೋಟಿಗಳ ಬೆಳೆ ವಿಮೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥ ಪಡಿಸಲಾಗಿರುತ್ತದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜನವರಿ 2023 ರಿಂದ ಡಿಸೆಂಬರ್ 2023ರ ಅಂತ್ಯದವರೆಗೆ 37.03 ಲಕ್ಷ ಕುಟುಂಬಗಳ 63.13 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 101.18 ಲಕ್ಷ ಗ್ರಾಮೀಣ ಮನೆಗಳಿದ್ದು, ಈ ಪೈಕಿ ಈವರೆಗೆ 72.38 ಲಕ್ಷ ಮನೆಗಳಿಗೆ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ (ಜಲ್ ಜೀವನ್ ಮಿಷನ್) ಕಾರ್ಯಾತ್ಮಕ ನಳನೀರು ಸಂಪರ್ಕವನ್ನು ಒದಗಿಸಲಾಗಿದೆ.

2023-24 ನೇ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ರೂ.25,000 ಕೋಟಿಗಳನ್ನು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದ್ದು, 17.24 ಲಕ್ಷ ರೈತರಿಗೆ ರೂ. 13,672.74 3 3 ಕೋಟಿಗಗಳ ಬೆಳೆ ಸಾಲ ವಿತರಿಸಲಾಗಿದೆ  ಹಾಗೂ 15,775 ರೈತರಿಗೆ ರೂ.461 ಕೋಟಿಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಲಾಗಿದೆ.

ಕರ್ನಾಟಕ ರಾಜ್ಯವನ್ನು ಅನೀಮಿಯಾ ಮುಕ್ತ ರಾಜ್ಯವನ್ನಾಗಿಸಲು ಆಯವ್ಯಯದ ಘೋಷಣೆಯಂತೆ, ಒಟ್ಟು ರೂ.185.74 ಕೋಟಿಗಳ ವೆಚ್ಚದಲ್ಲಿ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ST-Elevated Myocardial Infraction (STEMI) ಕಾರ್ಯಕ್ರಮವನ್ನು ಜಯದೇವ ಹೃದ್ರೋಗ ಸಂಸ್ಥೆಯ ಸಹಯೋಗದೊಂದಿಗೆ 15 ಜಿಲ್ಲೆಗಳಲ್ಲಿ ಜಾರಿಗೊಳಿಸಿ, ಏಪ್ರಿಲ್ ನಿಂದ ನವೆಂಬರ್ ವರೆಗೆ 80,054 ರೋಗಿಗಳಿಗೆ ECG ಯನ್ನು ಮತ್ತು 1,084 ಹೃದ್ರೋಗಿಗಳಿಗೆ ತೃತೀಯ ಹಂತದ ಚಿಕಿತ್ಸೆ ನೀಡಲಾಗಿದೆ.

ಡಾ|| ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಸಾರ್ವಜನಿಕ ಸ್ಥಳಗಳಲ್ಲಿ ಹಠಾತ್ ಹೃದಯಾಘಾತದಿಂದ ಸಂಭವಿಸುವ ಮರಣಗಳನ್ನು ತಡೆಗಟ್ಟಲು ಸಾರ್ವಜನಿಕ ದಟ್ಟಣೆಯ ಸ್ಥಳ, ಬಸ್ಸು ನಿಲ್ದಾಣ, ರೈಲು ನಿಲ್ದಾಣ ಮತ್ತು ಸರ್ಕಾರಿ ಕಛೇರಿಗಳಲ್ಲಿ AED (Automated ಸಾಧನಗಳನ್ನು ರೂಪಿಸಲಾಗುತ್ತಿದೆ. External ಅಳವಡಿಸಲು Defibrillator) ಯೋಜನೆ

ರಾಜ್ಯಾದ್ಯಂತ 168 ಡಯಾಲಿಸಿಸ್‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 3,685 ರೋಗಿಗಳಿಗೆ 2,82,439 ಸೈಕಲ್‌ಗಳ ಡಯಾಲಿಸಿಸ್ ಸೇವೆಯನ್ನು ಉಚಿತವಾಗಿ ನೀಡಲಾಗಿದ್ದು, ಪ್ರಸ್ತುತವಿರುವ ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುತ್ತಿದೆ

108 ಆರೋಗ್ಯ ಕವಚ ಯೋಜನೆಯಡಿ ತುರ್ತು ಆಂಬುಲೆನ್ಸ್ ಸೇವೆಗಳಿಗೆ ಹೊಸದಾಗಿ 262 ಹೊಸ ಆಂಬುಲೆನ್ಸ್ ಗಳನ್ನು (105 Advanced Life Support Ambulance, 157 Basic Life Support Ambulance) ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ “ಬ್ರಾಂಡ್ ಬೆಂಗಳೂರು” ‘ಸಾರ್ವಜನಿಕರ ಧ್ವನಿ’ ಸರ್ಕಾರದ ಧ್ವನಿ ಎಂಬ ಮನೋಭಾವದಿಂದ ರೂಪಿಸಲಾಗಿರುತ್ತದೆ. ಈ ಪರಿಕಲ್ಪನೆಯಡಿ 8 ಪ್ರಮುಖ ವಿಷಯಗಳ ಕುರಿತು ತಜ್ಞರಿಂದ ಹಾಗೂ ಸಾರ್ವಜನಿಕರಿಂದ ಸಲಹೆ ಪಡೆಯಲಾಗಿದೆ. ಸಾರ್ವಜನಿಕ ಸಂಘಗಳು, ನಾಗರೀಕ ಹಿತರಕ್ಷಣಾ ವೇದಿಕೆಗಳು, ಕೈಗಾರಿಕಾ ವಲಯದ ತಜ್ಞರೊಂದಿಗೆ ಸಂವಾದ ನಡೆಸಲಾಗಿದೆ. ಅದರಂತೆ, 70,000 ಕ್ಕೂ ಹೆಚ್ಚು ಸಲಹೆಗಳನ್ನು ಸಂಗ್ರಹಿಸಿ, ಸದರಿ ಸಲಹೆಗಳನ್ನು ಸಮಿತಿಯು ಪರಿಶೀಲಿಸಿ ಶಿಫಾರಸು ಮಾಡುತ್ತದೆ.

ಬೆಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸುಗಮ ಸಂಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯತೆಯನ್ನು ಮನಗಂಡು ಬೆಂಗಳೂರಿನ ಮುಖ್ಯ ರಸ್ತೆಗಳ ಸುಸ್ಥಿರ ಅಭಿವೃದ್ಧಿಗಾಗಿ ಸುಮಾರು 2000 ರೂಪಾಯಿಗಳ ಯೋಜನೆಯನ್ನು ರೂಪಿಸಿ ಪ್ರಮುಖ ರಸ್ತೆಗಳ ವೈಟ್ ಟಾಪಿಂಗ್‌ಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನ ನೀಡಲಾಗಿರುತ್ತದೆ.

ಬೆಂಗಳೂರು ನಗರದ ದಟ್ಟಣೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ಹಿತದೃಷ್ಟಿಯಿಂದ ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳನ್ನು (Tunnel Roads) ನಿರ್ಮಿಸಲು ಯೋಜಿಸಲಾಗಿದೆ.  ಪ್ರಾಯೋಗಿಕವಾಗಿ 2 ಕಿ.ಮೀ ವಿಸ್ತೀರ್ಣದ ಸುರಂಗ ರಸ್ತೆಯ ನಿರ್ಮಾಣಕ್ಕಾಗಿ ಅಂತರಾಷ್ಟ್ರೀಯ ಏಜೆನ್ಸಿಯ ನೆರವಿನಿಂದ ಡಿ.ಪಿ.ಆರ್ ತಯಾರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿರುತ್ತದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಭಾರತ ಸಂವಿಧಾನ’ ಪೀಠಿಕೆ ವಿನ್ಯಾಸದ ಪೋಟೋವನ್ನು ತೂಗು ಹಾಕಲು ಹಾಗೂ ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲು ಕ್ರಮವಹಿಸಲಾಗಿದೆ.

2023-24ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ. 1,89,435 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದೆ

ಪರಿಶಿಷ್ಟ ಜಾತಿಯ 69,190 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ.133.82 ಕೋಟಿ ಮೊತ್ತದ ಪ್ರೋತ್ಸಾಹ ಧನ ನೀಡಲಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ “ಸ್ವಾವಲಂಬಿ ಸಾರಥಿ” ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ನಾಲ್ಕು ಚಕ್ರಗಳ ವಾಹನಗಳಿಗೆ ಶೇ.75 ರಷ್ಟು ಗರಿಷ್ಠ ರೂ. 4.00 ಲಕ್ಷಗಳ ಸಹಾಯಧನ ನೀಡಲು ಕ್ರಮವಹಿಸಲಾಗುತ್ತಿದೆ.

ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಒಟ್ಟು ರೂ.190.00 ಕೋಟಿಗಳ ಅನುದಾನದಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲಾಗಿದೆ.

ರಾಜ್ಯದ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6 ನೇ ತರಗತಿಯಿಂದ 12ನೇ ತರಗತಿಯವರೆಗೆ ಸಂಯೋಜಿತ ಶಾಲೆಗಳನ್ನಾಗಿ ಉನ್ನತೀಕರಿಸಲಾಗಿದ್ದು, ಇದರಿಂದ 1191 ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದಾರೆ.

 ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳು ಪಡೆಯುವ ಸಾಲಕ್ಕೆ ಶೇಕಡ 6ರ ಬಡ್ಡಿದರದಲ್ಲಿ ರೂ.10.00 ಕೋಟಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಪುಸಕ್ತ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ರೂ.54.40 ಕೋಟಿಗಳ ವೆಚ್ಚದಲ್ಲಿ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಸರ್ಕಾರ ಕ್ರಮ ವಹಿಸುತ್ತಿದೆ.

ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ “ಕರ್ನಾಟಕ ಸಂಭ್ರಮ-50” ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ.

ಸಂಕಷ್ಟದಲ್ಲಿರುವ ನಿವೃತ್ತ ಪತ್ರಕರ್ತರ ಮಾಸಾಶನ ಮೊತ್ತವನ್ನು 12000 ರೂ. ಗಳಿಗೆ ಹಾಗೂ ಕುಟುಂಬ ಮಾಸಾಶನದ ಮೊತ್ತವನ್ನು 6000 ರೂ. ಗಳಿಗೆ ಹೆಚ್ಚಿಸಲಾಗಿದೆ.

ಅರಣ್ಯ ಇಲಾಖೆಯು ರೇಷ್ಮೆ ಕೃಷಿ, ಹವಾಮಾನ ಬದಲಾವಣೆ, ಲೋಹಗಳ ಸಾಂಧ್ರತೆ, ಭೂವಲಯ ಒಳಾಂಗಣ ಸಸ್ಯಗಳ ಅನ್ವೇಷಣೆ, ಮೈಕ್ರೋ ಆಲೆಗಳ ಪರಿಶೋಧನೆ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ನದಿಯ ಪುನಶ್ವೇತನ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ಸಂಶೋಧನೆಯನ್ನು ನಡೆಸಿರುತ್ತದೆ.

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ ಶಾಲಾ-ಕಾಲೇಜುಗಳ ಆವರಣದಲ್ಲಿ ಅಂದಾಜು 50 ಲಕ್ಷ ಸಸಿಗಳನ್ನು ನೆಡುವ ವಿಶಿಷ್ಟ ‘ಸಸ್ಯ ಶ್ಯಾಮಲ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ.

 ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ನಂತರ ಪುಯಾಣಿಕರಿಂದ ಅತ್ಯುತ್ತಮ ಸ್ಪಂದನೆ ದೊರಕಿದೆ. ‘ಇದರೊಂದಿಗೆ ರಾಜ್ಯದ ಎಲ್ಲಾ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳ ಸಂಖ್ಯೆ ಹಾಗೂ ಸೇವೆಯನ್ನು ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಕಳೆದ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಮಾದರಿಯ 1148 ಸಂಖ್ಯೆಯ ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಆಪ್‌ನ ಮೂಲಕ ನಾಗರೀಕರಿಗೆ ವಾಹನ ಕಳುವಿನ ಕುರಿತು ಯಾವುದೇ ಶ್ರಮವಿಲ್ಲದೆ ಮನೆಯಿಂದಲೇ ಪ್ರಕರಣ ದಾಖಲಿಸುವ ಅವಕಾಶ ಕಲ್ಪಿಸಲಾಗಿದೆ.

 “ಇ-ಚಲನ್” ವ್ಯವಸ್ಥೆಯು ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಬಾಕಿ ಉಳಿದಿರುವ ದಂಡಗಳನ್ನು ಪತ್ತೆ ಹಚ್ಚಲು ಅನುವುಮಾಡಿಕೊಡುತ್ತದೆ ಮತ್ತು ಆನ್‌ಲೈನ್ ನಲ್ಲಿ ದಂಡವನ್ನು ಪಾವತಿಸಲು ಅವಕಾಶವನ್ನು ಒದಗಿಸುತ್ತದೆ.

ತಳಮಟ್ಟದಲ್ಲಿ ಪೊಲೀಸಿಂಗ್ ವ್ಯವಸ್ಥೆ ಬಲಪಡಿಸಲು ಹಗಲು/ರಾತ್ರಿ ಗಸ್ತುಗಳನ್ನು “ಇ-ಬೀಟ್” ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ.

ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಗಳಲ್ಲಿ 165 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ಸುಮಾರು ರೂ.45,325 ಕೋಟಿಗಳ ಬಂಡವಾಳ ಹೂಡಿಕೆಯಾಗಿ, 42,292 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.

ದೇಶದ ಸಾಫ್ಟ್‌ವೇರ್ ರಪ್ಟಿನಲ್ಲಿ 42% ಕರ್ನಾಟಕದ ಕೊಡುಗೆಯಾಗಿದೆ. ರಾಜ್ಯ ಸರ್ಕಾರವು ಐಟಿ ಮತ್ತು ಬಿಟಿ ವಲಯಗಳ ಬದಲಾಗುತ್ತಿರುವ ಅಗತ್ಯತೆಗಳಿಗೆ ಅನುಗುಣವಾಗಿ ತನ್ನ ನೀತಿಗಳನ್ನು ನಿಯಮಿತವಾಗಿ ಪರಿಷ್ಕರಿಸುತ್ತದೆ ಮತ್ತು ಅತ್ಯಾಧುನಿಕ ಹಾಗೂ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯಗಳನ್ನು ನವೀಕರಿಸುತ್ತದೆ.

ಬೆಂಗಳೂರು ಟೆಕ್ ಸಮ್ಮಿಟ್ ನ 26ನೇ ಆವೃತ್ತಿಯ ಸಮಾವೇಶವನ್ನು ‘ಬ್ರೇಕಿಂಗ್ ಬೌಂಡರೀಸ್’ ಎಂಬ ಧೇಯವಾಕ್ಯದೊಂದಿಗೆ ದಿನಾಂಕ:29.11.2023 ರಿಂದ ದಿನಾಂಕ:01.12.2023 ರವರೆಗೆ ನಡೆಸಲಾಗಿದ್ದು, ಇದರಲ್ಲಿ ಸುಮಾರು 40 ರಾಷ್ಟ್ರಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿವೆ.

ದಿನಾಂಕ : 23-09-2023 00d 08-10-2023 ರ ವರೆಗೆ ಚೀನಾ ದೇಶದ ಹಾಂಗ್‌ಝೌನಲ್ಲಿ ನಡೆದ 19ನೇ ಏಷಿಯನ್ ಗೇಮ್ಸ್-2023ರಲ್ಲಿ ಕರ್ನಾಟಕದ ಎಂಟು ಕ್ರೀಡಾಪಟುಗಳು 9 ಪದಕಗಳನ್ನು ಗೆದ್ದು, ದೇಶಕ್ಕೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ಈ ಕ್ರೀಡಾಪಟುಗಳಿಗೆ ಒಟ್ಟು ರೂ.175.00 ಲಕ್ಷಗಳ ನಗದು ಬಹುಮಾನ ನೀಡಿ ಸನ್ಮಾನಿಸಲಾಗಿರುತ್ತದೆ.

ಕಂದಾಯ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭೂಮಾಪನ ಭೂವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಸ್ವಾವಲಂಬಿ ಡಿಜಿಟಲೀಕರಣ ಆಕಾರ್ ಬಂದ್, ಯುಪಿಒಆರ್ ಯೋಜನೆ, ಮರು ಸಮೀಕ್ಷೆ ಮುಂತಾದ ವಿಶೇಷ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನನ್ನು ಪುನ‌ರ್ ಸ್ಥಾಪಿಸುವುದಕ್ಕಾಗಿ ಯಾವುದೇ ಕಾಲಮಿತಿ ಇರುವುದಿಲ್ಲವೆಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ, 1978ರ ಪ್ರಕರಣ 5ಕ್ಕೆ ತಿದ್ದುಪಡಿ ತರಲಾಗಿದೆ. ಈ ಸಮುದಾಯಗಳ ಜನರ ಭೂ ಒಡೆತನದ ಹಕ್ಕನ್ನು ನನ್ನ ಸರ್ಕಾರ ಖಾತರಿ ಪಡಿಸಿದೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಡಿ 4.14 ಲಕ್ಷ ನೌಕರರು ನೋಂದಣಿಯಾಗಿದ್ದು, ಇಲ್ಲಿಯವರೆಗೆ 3.33 ಲಕ್ಷ ಫಲಾನುಭವಿಗಳಿಗೆ ರೂ.359.55 ಕೋಟಿ ಮೊತ್ತದಷ್ಟು ಸಹಾಯಧನ ವಿತರಿಸಲಾಗಿದೆ.

 ಸೇವಾಸಿಂಧು (ನಾಗರಿಕ ಸೇವೆಗಳು): ಎಲ್ಲಾ ಖಾತರಿ ಯೋಜನೆಗಳಿಗೆ ದಾಖಲಾತಿ ವೇದಿಕೆಯಾಗಿದೆ. ರಾಜ್ಯ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ 44 ಯೋಜನೆಗಳನ್ನು ಡಿಬಿಟಿ ವೇದಿಕೆಯಲ್ಲಿ ಸಂಯೋಜಿಸಿರುವುದರಿಂದ ಒಟ್ಟು ರೂ.10,035 ಕೋಟಿಗಳ ಆರ್ಥಿಕ ನೆರವನ್ನು 2.54 ಕೋಟಿ ಜನರಿಗೆ ತಲುಪಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಗಾಗಿ ಕಾವೇರಿ 2.0 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು ಇದು ರೂ.10483. ಕೋಟಿಗಳ ಹೆಚ್ಚುವರಿ ಆದಾಯಕ್ಕೆ ಗಮನಾರ್ಹ ಕೊಡುಗೆ ನೀಡಿದೆ.

2023-24 ಸಾಲಿನ ಆಯವ್ಯಯದಲ್ಲಿ జల ಸಂಪನ್ಮೂಲ ಇಲಾಖೆಗೆ (ಭಾರಿ ಮತ್ತು ಮಧ್ಯಮ ನೀರಾವರಿ) ಒಟ್ಟು ರೂ. 16,735.49 ಕೋಟಿ ಅನುದಾನ ಒದಗಿಸಲಾಗಿದೆ. ನವೆಂಬರ್ -2023 ಅಂತ್ಯಕ್ಕೆ ರೂ.9223.24 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಮತ್ತು  31,117.98 ಎಕರೆ (12,593 ಹೆಕ್ಟರ್) ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗಿದೆ.

ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ಕಾಮಗಾರಿಗಳು ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಗುರುತ್ವ ಕಾಲುವೆಯ 42.00 ಕಿ.ಮೀ.ವರೆಗೆ ಯೋಜಿಸಲಾಗಿದೆ. ಹರಿಸಿ ಚಾಲನೆಗೊಳಿಸಲು ಯೋಜಿಸಲಾಗಿದೆ.

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಪರಿಹಾರಕ ಅರಣ್ಯವೃದ್ಧಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಹಾಗೂ ಯೋಜನಾ ಕಾಮಗಾರಿಗಳನ್ನು ಮತ್ತು భ ಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

ಉತ್ತರ ಕರ್ನಾಟಕದ ಪ್ರತಿಷ್ಠಿತ ಕೃಷ್ಣಾ ಮೇಲ್ಕಂಡ ಯೋಜನೆ ಹಂತ-3ರಡಿಯ ಕಾಮಗಾರಿಗಳನ್ನು ತ್ವರಿತಗೊಳಿಸುವ ಯೋಜನಾ ಸಲುವಾಗಿ ಭೂಸ್ವಾಧೀನ ಮತ್ತು ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಪ್ರಕ್ರಿಯೆಗೆ ಆದ್ಯತೆ ನೀಡಲಾಗಿದೆ.

 ಸಂವಿಧಾನ ಅನುಷ್ಠಾನಗೊಂಡ 75ನೇ ವರ್ಷದಲ್ಲಿ ಕರ್ನಾಟಕ ಹಾಗೂ ಭಾರತವು ಅಭೂತಪೂರ್ವ ಪುಗತಿಯನ್ನು ಸಾಧಿಸಿವೆ. ಇದು ನಾವು 1950 ರಲ್ಲಿ ನಮ್ಮ ಅದ್ಭುತ ಲಿಖಿತ ಸಂವಿಧಾನವನ್ನು ಅಳವಡಿಸಿಕೊಂಡ ಕಾರಣದಿಂದಾಗಿ ಸಾಧ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರ ದೂರದೃಷ್ಟಿಗೆ ನಾವು ಅಭಾರಿಯಾಗಿದ್ದೇವೆ. ಅವರು ನಮಗೆ ಪ್ರಗತಿಯ ದಾರಿಯಲ್ಲಿ ನಡೆಯುವುದಕ್ಕೆ ದಾರಿದೀಪವಾಗಿದ್ದಾರೆ.

ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ, ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ “ವಿವಿಧತೆಯಲ್ಲಿ ಏಕತೆ” ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ನಾವು ಶ್ರಮಿಸಬೇಕು. ಕರ್ನಾಟಕದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...