ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಸಿತ್ತು. ಅದರಂತೆ ರಾಜ್ಯ ಸರ್ಕಾರವು ಒಂದೇ ಬಾರಿಗೆ 59 ತಿಂಗಳ ಗೃಹಲಕ್ಷ್ಮಿ ಹಣವನ್ನು ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಗೃಹಲಕ್ಷ್ಮಿ ಹಣವನ್ನು ಸಮರ್ಪಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳ 2,000 ರೂ. ನಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ 59 ತಿಂಗಳ ಹಣವನ್ನು ತಾಯಿಯ ಸನ್ನಿಧಿಗೆ ಅರ್ಪಿಸಲಾಗಿದೆ, ಒಟ್ಟು ಒಂದು ಲಕ್ಷದ ಹದಿನೆಂಟು ಸಾವಿರ ರೂ.ಗಳನ್ನು ಅರ್ಪಿಸಲಾಗಿದೆ.