ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಮುಂದಿನ ಹುದ್ದೆಗೆ ಪದೋನ್ನತಿ ಪಡೆಯಲು ಅರ್ಹತೆಯನ್ನು ನಿಗದಿಪಡಿಸುವ ಸಂಬಂಧ “ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯ) ನಿಯಮಗಳು, 2025” ಎಂಬ ಕರಡು ನಿಯಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಸದರಿ ನಿಯಮಗಳ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ. ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ, ತಮ್ಮ ಇಲಾಖೆಯ ಸಹಮತಿ/ ಅಭಿಪ್ರಾಯ/ಆಕ್ಷೇಪಣೆ ಇದ್ದಲ್ಲಿ, ದಿನಾಂಕ 05.04.2025 ರೊಳಗಾಗಿ ನೀಡುವಂತೆ ತಮ್ಮನ್ನು ಕೋರಿದೆ ಎಂದು ತಿಳಿಸಲಾಗಿದೆ.



