![](https://kannadadunia.com/wp-content/uploads/2024/01/Gazetted-Probationers.jpg)
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿ ಸಡಿಲಿಕೆಗೆ ನಿರ್ಧಾರಿಸಲಾಗಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಅಧಿಸೂಚನೆ ಹೊರಡಿಸಲಿದ್ದು, ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಾಮಾನ್ಯ ವರ್ಗಕ್ಕೆ 35 ರಿಂದ 38 ಪ್ರವರ್ಗ 2ಎ, 2ಬಿ, 3ಎ,3ಬಿ ಗೆ 38 ರಿಂದ 41 ಪರಿಶಿಷ್ಟ ಪಂಗಡ ಪ್ರವರ್ಗ 1ಕ್ಕೆ 40 ರಿಂದ 43 ವಯೋಮಿತಿ ವಿಸ್ತರಣೆ ಮಾಡಲಾಗುತ್ತದೆ.