![](https://kannadadunia.com/wp-content/uploads/2024/01/Unauthorized-School.jpg)
ಬೆಂಗಳೂರು : ರಾಜ್ಯ ಸರ್ಕಾರದಿಂದ ʻಅನಧಿಕೃತʼ ಶಾಲೆಗಳ ವಿರುದ್ಧ ಮಹತ್ವದ ಕ್ರಮ ಕೈಗೊಂಡಿದ್ದು, 1,695 ಶಾಲೆಗಳು ಮುಚ್ಚುವಂತೆ ಸುತ್ತೋಲೆ ಹೊರಡಿಸಿದೆ.
ಅನಧಿಕೃತ ಶಾಲೆಗಳಿಗೆ ವಿದ್ಯಾರ್ಥಿಗಳು ದಾಖಲಾಗದಂತೆ ನೋಡಿಕೊಳ್ಳಲು 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂರು ಸುತ್ತೋಲೆ ಹೊರಡಿಸಿದೆ.
ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ, ಅನಧಿಕೃತ ಶಾಲೆಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿ, ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿ ಅಲ್ಲಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ನಿರ್ಬಂಧಿಸಬೇಕು. ಈ ಜವಾಬ್ದಾರಿ ಇಲಾಖೆಯ ಸ್ಥಳೀಯ ಅಧಿಕಾರಿಗಳದ್ದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.