alex Certify BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ವಾರ್ಷಿಕ ಪರೀಕ್ಷೆಯ ಕರಡು ‘ಪ್ರವೇಶ ಪತ್ರ’ ತಿದ್ದುಪಡಿಗೆ ಅವಕಾಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ವಾರ್ಷಿಕ ಪರೀಕ್ಷೆಯ ಕರಡು ‘ಪ್ರವೇಶ ಪತ್ರ’ ತಿದ್ದುಪಡಿಗೆ ಅವಕಾಶ.!

ಬೆಂಗಳೂರು : 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ನೋಂದಣಿಯಾಗಿರುವ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವ ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿಗಳನ್ನು ಅಪ್ಡೇಟ್ ಮಾಡುವ ಬಗ್ಗೆ ಪರೀಕ್ಷಾಂಗ ಇಲಾಖೆ ಮಾಹಿತಿ ನೀಡಿದೆ. ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ನಿಗದಿತ ದಿನಾಂಕದೊಳಗೆ ಅಪ್ ಡೇಟ್ ಮಾಡಬಹುದಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಅಭ್ಯರ್ಥಿಗಳು) ಕರಡು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಮತ್ತು ವಿದ್ಯಾರ್ಥಿಗಳ ವಿವರಗಳಲ್ಲಿ ತಿದ್ದುಪಡಿಗಳಿದ್ದಲ್ಲಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಲು ದಿನಾಂಕ: 27-01-2025 ರಿಂದ ಅವಕಾಶ ಕಲ್ಪಿಸಲಾಗಿದೆ.

ಮಂಡಲಿಯ ಜಾಲತಾಣದ ಶಾಲಾ ಲಾಗಿನ್ನಲ್ಲಿ ಲಭ್ಯವಿರುವ ತಂತ್ರಾಂಶವನ್ನು ಬಳಸಿ ಎಲ್ಲಾ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ ಕರಡು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ, ಅಗತ್ಯವಿದ್ದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳ ತಿದ್ದುಪಡಿಗಳನ್ನು ಅಪ್ಡೇಟ್ ಮಾಡಲು ಸೂಚಿಸಿದೆ. ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಅಂತಿಮಗೊಳಿಸಲು ಇದು ಕೊನೆಯ ಅವಕಾಶವಾಗಿದ್ದು, ಇದೇ ವಿವರಗಳು ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರ ಹಾಗೂ ಅಂಕಪಟ್ಟಿಗಳಲ್ಲಿ ನಮೂದಾಗುತ್ತವೆ. ಈ ಕುರಿತು ಏನಾದರೂ ವ್ಯತ್ಯಾಸಗಳು ಕಂಡುಬಂದಲ್ಲಿ ಮುಖ್ಯ ಶಿಕ್ಷಕರನ್ನೇ ಹೊಣೆಗಾರರನ್ನಾಗಿಸಲಾಗುವುದು.

1. ಮಂಡಲಿಯ ಜಾಲತಾಣ https://kseab.karnataka.gov.in ನ ಶಾಲಾ ಲಾಗಿನ್ನಲ್ಲಿ ತಂತ್ರಾಂಶ ಲಭ್ಯವಿದೆ.
2. ಮಾನ್ಯ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಸುತ್ತೋಲೆ ಸಂಖ್ಯೆ:DPI-CPIOC- 2(OT)/25/2024-E-159858 22:09-01-2025003 2024-25 ಮಂಡಳಿಗಳು ಆನ್ಲೈನ್ ಮೂಲಕ ಪ್ರಥಮ ಮಾನ್ಯತೆ / ಮಾನ್ಯತೆ ನವೀಕರಣಕ್ಕೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ:31-01-2025ರವರೆಗೆ ಅವಕಾಶವಿರುತ್ತದೆ ಹಾಗೂ ಉಪನಿರ್ದೇಶಕರು (ಆಡಳಿತ)ರವರು ಪ್ರಸ್ತಾವನೆಗಳನ್ನು ಪರಿಶೀಲಿಸಿ ಮಾನ್ಯತೆ ನವೀಕರಣ ಪತ್ರವನ್ನು ನೀಡಲು ಅಥವಾ ತಿರಸ್ಕರಿಸಿದ್ದಲ್ಲಿ ತಿರಸ್ಕೃತ ಆದೇಶ ನೀಡಲು ದಿನಾಂಕ:07.03.2025 ಕೊನೆಯ ದಿನಾಂಕವಾಗಿರುತ್ತದೆ.

3. 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ವಿದ್ಯಾರ್ಥಿಗಳ ಮಾಹಿತಿಯನ್ನು ಪರಿಶೀಲಿಸಿ ವಿದ್ಯಾರ್ಥಿಗಳ ವೈಯುಕ್ತಿಕ ಮಾಹಿತಿ ಹಾಗೂ ಪರೀಕ್ಷೆಗೆ ನೋಂದಾಯಿಸಿದ ವಿಷಯಗಳ ಪರಿಶೀಲನೆಗಾಗಿ ಕರಡು ಪ್ರವೇಶ ಪತ್ರಗಳನ್ನು ನೀಡಲಾಗಿದೆ. ಸದರಿ ಕರಡು ಪ್ರವೇಶ ಪತ್ರಗಳನ್ನು ತಿದ್ದುಪಡಿಗಳಿದ್ದಲ್ಲಿ ಅಳವಡಿಸಲು ಮಾತ್ರ ನೀಡಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣ ಪಡೆದ ಶಾಲೆಗಳಿಗೆ ಮಾತ್ರ ಅಂತಿಮ ಪ್ರವೇಶಪತ್ರಗಳನ್ನು ನೀಡಲಾಗುವುದರಿಂದ ಮಾನ್ಯತೆ ನವೀಕರಣ ಪಡೆಯದ ಶಾಲೆಗಳು ಅಂತಿಮ ದಿನಾಂಕದವರೆಗೆ ಕಾಯದೇ ಕೂಡಲೇ ಮಾನ್ಯತೆ ನವೀಕರಣ ಪಡೆದು ಮಂಡಲಿಗೆ ಸಲ್ಲಿಸಲು ಸೂಚಿಸಿದೆ.

ಉಲ್ಲೇಖಿತ ಮಾನ್ಯ ಆಯುಕ್ತರ ಸುತ್ತೋಲೆಯನ್ವಯ ದಿನಾಂಕ:07.03.2025 ಮಾನ್ಯತೆ ನವೀಕರಣ ಪ್ರಮಾಣ ಪತ್ರ ನೀಡಲು ಅಂತಿಮ ದಿನಾಂಕವಾಗಿದ್ದು, ಈ ದಿನಾಂಕದ ಒಳಗೆ ಮಾನ್ಯತೆ ನವೀಕರಣ ನೀಡದ ಶಾಲೆಗಳ ಅಂತಿಮ ಪ್ರವೇಶ ಪತ್ರವನ್ನು ತಡೆಹಿಡಿಯಲಾಗುವುದು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹತ್ತಿರದ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಪ್ರೌಢ ಶಾಲೆಗಳ ಮೂಲಕ ಪರೀಕ್ಷೆ-1ಕ್ಕೆ ಹಾಜರುಪಡಿಸಲು ಕ್ರಮವಹಿಸಲಾಗುವುದು.

4. ಶಾಲೆಯ ಮುಖ್ಯಸ್ಥರು ತಮ್ಮ ಶಾಲೆಯ ಎಲ್ಲಾ ಶಿಕ್ಷಕರ ವಿವರಗಳನ್ನು Evaluators Registration 2025 ನಲ್ಲಿ ನೋಂದಣಿ/ಅಪ್ಡೇಟ್ ಮಾಡಿ Freeze ಮಾಡಿದ್ದಲ್ಲಿ ಮಾತ್ರ ಕರಡು ಪ್ರವೇಶ ಪತ್ರಗಳು ಡೌನ್ಲೋಡ್ ಆಗುತ್ತವೆ ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...