ಬೆಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗಾಗಿ ಬೆಂಗಳೂರು ನಗರ ಸಜ್ಜಾಗುತ್ತಿದ್ದು ರಾಜ್ಯ ಸರ್ಕಾರ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದ್ದು ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಲು ನಿರ್ದೇಶನ ನೀಡಲಾಗಿದೆ. ವಾಹನ ದಟ್ಟಣೆ ನಿಯಂತ್ರಣ, ಪಾರ್ಕಿಂಗ್ ವ್ಯವಸ್ಥೆಗೆ ನಿಯಮಗಳನ್ನು ರೂಪಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ಗಳನ್ನೇ ಹೊಣೆ ಮಾಡಲಾಗುವುದು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನಗತ್ಯ ರಜೆ ನೀಡುವುದು ಬೇಡ, ತೀವ್ರ ಅನಿವಾರ್ಯತೆ ಇದ್ದರೆ ರಜೆ ನೀಡಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗಾಗಿ ಬೆಂಗಳೂರು ನಗರ ಸಜ್ಜಾಗುತ್ತಿದ್ದು ರಾಜ್ಯ ಸರ್ಕಾರ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದ್ದು ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಲು ನಿರ್ದೇಶನ ನೀಡಲಾಗಿದೆ.
ವಾಹನ ದಟ್ಟಣೆ ನಿಯಂತ್ರಣ, ಪಾರ್ಕಿಂಗ್… pic.twitter.com/SDs6cEvg4p
— Karnataka Congress (@INCKarnataka) December 24, 2024