ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಸಿಲುಕಿಕೊಂಡಿರುವ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ವಾಪಸ್ ಮರಳುವುದು ಮತ್ತಷ್ಟು ವಿಳಂಬವಾಗಲಿದೆ.
ಇವರುಗಳು ತೆರಳಿರುವ ಬಾಹ್ಯಾಕಾಶ ನೌಕೆಯಲ್ಲಿ ಬಹು ತಾಂತ್ರಿಕ ಸಮಸ್ಯೆ ತಲೆದೋರಿರುವ ಕಾರಣ ಅದನ್ನು ಸರಿಪಡಿಸಿದ ಬಳಕವಷ್ಟೇ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ವಾಪಸ್ ಭೂಮಿಗೆ ಬರಲು ಸಾಧ್ಯವಾಗಲಿದ್ದು, ಈ ಕಾರ್ಯ ಬಿರುಸಿನಿಂದ ಸಾಗಿದೆ.
ಇದರ ಮಧ್ಯೆ ನಿಗದಿತ ಅವಧಿ ಮೀರಿ ಗಗನಯಾತ್ರಿಗಳು ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿದರೆ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಕೂಡ ವ್ಯಕ್ತವಾಗಿದ್ದು, ಬಾಹ್ಯಾಕಾಶ ನೌಕೆ ಬೋಯಿಂಗ್ ಸ್ಟಾರ್ ಲೈನರ್ ನಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿದ ಬಳಿಕ 2025ರ ಫೆಬ್ರವರಿಯಲ್ಲಿ ಈ ಇಬ್ಬರು ಗಗನಯಾತ್ರಿಗಳು ಭೂಮಿಗೆ ಮರಳಬಹುದು ಎಂದು ನಾಸಾ ತಿಳಿಸಿದೆ.