ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು ಎಂದು ಸೂಚನೆ ನೀಡಿದೆ.
ಹೋಮ್ ಐಸೊಲೇಷನ್‌ನಲ್ಲಿರುವ 400 ಕೋವಿಡ್ ಸೋಂಕಿತರ ಮನೆಗಳಿಗೆ ವೈದ್ಯರು ಭೇಟಿ ನೀಡಿ ನಿಗಾ ವಹಿಸಲು ಸೂಚನೆ ನೀಡಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಬೇಕು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಜೊತೆಗೆ ಇಂದಿನಿಂದ ಪ್ರತಿ ನಿತ್ಯ 5 ಸಾವಿರ ಕೋವಿಡ್ ಟೆಸ್ಟಿಂಗ್ ನಡೆಸಲು, ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು, 4 ಮೊಬೈಲ್ ಆಕ್ಸಿಜನ್ ಕಂಟೆಂಡರ್‌ಗಳ ಖರೀದಿಸಲು ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.