ಬೆಂಗಳೂರು : ‘ ಡೆಂಗ್ಯೂ’ ಪರೀಕ್ಷೆಗೆ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ದರ ನಿಗದಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಅಧಿಕೃತ ಆದೇಶ ಪ್ರಕಟವಾಗಲಿದೆ.
ಡೆಂಗ್ಯೂ ಪ್ರತಿ ಟೆಸ್ಟ್ ಗೆ 300 ರೂ.ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆ ಇದೆ. ಡೆಂಗ್ಯೂ ಎರಡು ಮಾದರಿಯ ಪರೀಕ್ಷೆ ಮಾಡಬೇಕಿದೆ. ಹೀಗಾಗಿ ಡೆಂಗ್ಯೂ ಪ್ರತಿ ಟೆಸ್ಟ್ ಗೆ 300 ರೂ ನಿಗದಿಪಡಿಸುವ ಸಾಧ್ಯತೆಯಿದ್ದು, 2 ಪರೀಕ್ಷೆಗೆ ಒಟ್ಟು 600 ರೂ ನಿಗದಿಪಡಿಸುವ ಸಾಧ್ಯತೆಯಿದೆ.ಶೀಘ್ರವೇ ಅಧಿಕೃತ ಆದೇಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಆರೋಗ್ಯ ಇಲಾಖೆ ಈ ಮಹತ್ವದ ಕ್ರಮ ಕೈಗೊಂಡಿದೆ.