ಬೆಂಗಳೂರು : ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿ ಪ್ರಕಟಗೊಂಡಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಪಟ್ಟಿ ಪರಿಶೀಲಿಸಲು ಶಿಕ್ಷಣ ಇಲಾಖೆ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
ವೀಕ್ಷಿಸುವುದು ಹೇಗೆ?
ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ‘ಖಾಸಗಿ ಅನುದಾನರಹಿತ ಅಧಿಕೃತ ಶಾಲೆಗಳ ಪಟ್ಟಿ’ ಮೇಲೆ ಕ್ಲಿಕ್ ಮಾಡಿ. ಜಿಲ್ಲೆ ಹಾಗೂ ಬ್ಲಾಕ್ ಆಯ್ಕೆ ಮಾಡಿ. ವ್ಯೂ ಕ್ಲಿಕ್ ಮಾಡಿದರೆ ಪಿಡಿಎಫ್ ಫೈಲ್ ಡೌನ್ಲೋಡ್ ಆಗಲಿದೆ.
ಶಾಲಾ ಶುಲ್ಕ ವಸೂಲಾತಿ ಕುರಿತು ಖಾಸಗಿ ಶಾಲೆಗಳಿಗೆ ‘ಶಿಕ್ಷಣ ಇಲಾಖೆ’ ಮಹತ್ವದ ಸೂಚನೆ
ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪಡೆಯುವ ಸಂಬಂಧ ಉಲ್ಲೇಖದ ಶಿಕ್ಷಣ ಹಕ್ಕು ಕಾಯಿದೆ -2009 ರನ್ವಯ ಈ ಕೆಳಕಂಡಂತೆ ತಿಳಿಸಲಾಗಿದೆ.
ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್-2(b) ರಂತೆ ಎಲ್ಲಾ ಖಾಸಗಿ ಶಾಲೆಗಳು ತಾವು ಅಧಿಸೂಚಿಸಿದ ಶುಲ್ಕವನ್ನು ತಮ್ಮ ಶಾಲಾ ಜಾಲತಾಣದಲ್ಲಿ ಶಾಲಾ ಸೂಚನಾ ಫಲಕದಲ್ಲಿ ಮತ್ತು ಇಲಾಖಾ ಜಾಲತಾಣದಲ್ಲಿ (SATS) ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಪಡಿಸಲು ಹಾಗೂ ಶುಲ್ಕ ವಸೂಲಾತಿ ಮತ್ತು ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೆಕ್ಷನ್-13ರ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಿದೆ.
ತಮ್ಮ ವ್ಯಾಪ್ತಿಯ ಯಾವುದೇ ಶಾಲೆಗಳು ಸೆಕ್ಷನ್-2(b) ಮತ್ತು ಸೆಕ್ಷನ್ 13(1) ಅನ್ನು ಉಲ್ಲಂಘಿಸಿರುವ ಬಗ್ಗೆ ದೂರುಗಳು ದಾಖಲಾದಲ್ಲಿ, ಸೆಕ್ಷನ್ 13(2) ಮತ್ತು ಸೆಕ್ಷನ್ 13(2)b ರಂತೆ ಹಾಗೂ ಕರ್ನಾಟಕ ಕಡ್ಡಾಯ ಮತ್ತು ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012 ರ ನಿಯಮ-23ರಲ್ಲಿ ತಿಳಿಸಿದಂತೆ ಆಗತ್ಯ ಕ್ರಮವಹಿಸಲು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರಿಗೆ ಸೂಚಿಸಿದೆ.