alex Certify BIG NEWS : ಕಂಚು ಗೆದ್ದ ಭಾರತದ ‘ಸ್ವಪ್ನಿಲ್ ಕುಸಾಲ್’ ಗೆ 1 ಕೋಟಿ ಬಹುಮಾನ ಘೋಷಿಸಿದ ‘ಮಹಾ’ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಂಚು ಗೆದ್ದ ಭಾರತದ ‘ಸ್ವಪ್ನಿಲ್ ಕುಸಾಲ್’ ಗೆ 1 ಕೋಟಿ ಬಹುಮಾನ ಘೋಷಿಸಿದ ‘ಮಹಾ’ ಸರ್ಕಾರ

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್ ನಲ್ಲಿ ಶೂಟರ್ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗಳಿಸಿ ಗಮನ ಸೆಳೆದಿದ್ದಾರೆ.

ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ ಏಕನಾಥ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 1 ಕೋಟಿ ಬಹುಮಾನ ಘೋಷಿಸಿದೆ. ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ ಮಹಾರಾಷ್ಟ್ರ ಸರ್ಕಾರದ ಬಹುಮಾನದ ಹೊರತಾಗಿ ಕೇಂದ್ರ ಸರ್ಕಾರದಿಂದ 30 ಲಕ್ಷ ಹಾಗೂ ಭಾರತೀಯ ಒಲಂಪಿಕ್ಸ್ ಸಂಸ್ಥೆಯಿಂದ 50 ಲಕ್ಷ ಬಹುಮಾನ ಸಿಗಲಿದೆ.

ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಗಳಿಸಿದ ಶೂಟರ್ ಸ್ವಪ್ನಿಲ್ ಕುಸಾಲೆ ಫೈನಲ್ ನಲ್ಲಿ ಒಟ್ಟು 590 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್ ಕುಶಾಲೆ ಮಂಡಿಯೂರಿ ಶೂಟ್ ಮಾಡುವ ವಿಭಾಗದಲ್ಲಿ 153.03 (50.8, 50.9, 51.6) ಆರನೇ ಸ್ಥಾನದಲ್ಲಿದ್ದರು. ಇದಾದ ಬಳಿಕ ನೆಲದ ಮೇಲೆ ಮಲಗಿ ಶೂಟ್ ಮಾಡುವ ವಿಭಾಗದಲ್ಲಿ 310.1 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಜಿಗಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...