ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಸುತ್ತಮುತ್ತ ಜನರಿಗೆ ತೀವ್ರ ಉಪಟಳ ನೀಡುತ್ತಿದ್ದ ಆನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ಸುತ್ತಮುತ್ತ ಅನೇಕ ಗ್ರಾಮಗಳಿಗೆ ಭೀಕರ ಸಮಸ್ಯೆಯಾಗಿದ್ದ ಆನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ಮಾರ್ಚ್ 16ರಿಂದ ಕಾರ್ಯಾಚರಣೆ ಆರಂಭಿಸಿತ್ತು. ಇಂದು, ಹೆಬ್ಬನಹಳ್ಳಿ ಗ್ರಾಮದ ಬಳಿ 3ನೇ ಆನೆಯನ್ನೂ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಈ ಮೂಲಕ ಕಳೆದ ಒಂದು ವಾರದಲ್ಲಿ ಒಟ್ಟು 3 ಆನೆಗಳನ್ನು ಸೆರೆ ಹಿಡಿಯಲಾಗಿದ್ದು, ಈ ಭಾಗದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಪ್ರಾಣದ ಹಂಗು ತೊರೆದು ಪುಂಡಾನೆಗಳ ಸೆರೆ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಮಾವುತರು, ಪಶುವೈದ್ಯರು ಮತ್ತು ಮುಂಚೂಣಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಮಾನವ-ಆನೆ ಸಂಘರ್ಷ ನಿಯಂತ್ರಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂಬುದನ್ನು ಮತ್ತೊಮ್ಮೆ ಪುನರುಚ್ಛರಿಸುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಸುತ್ತಮುತ್ತ ಜನರಿಗೆ ತೀವ್ರ ಉಪಟಳ ನೀಡುತ್ತಿದ್ದ ಆನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿ!
ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ಸುತ್ತಮುತ್ತ ಅನೇಕ ಗ್ರಾಮಗಳಿಗೆ ಭೀಕರ ಸಮಸ್ಯೆಯಾಗಿದ್ದ ಆನೆಗಳ ಉಪಟಳ ತಡೆಯಲು ಅರಣ್ಯ ಇಲಾಖೆ ಮಾರ್ಚ್ 16ರಿಂದ ಕಾರ್ಯಾಚರಣೆ ಆರಂಭಿಸಿತ್ತು. ಇಂದು, ಹೆಬ್ಬನಹಳ್ಳಿ… pic.twitter.com/1PsqaKV36z
— Eshwar Khandre (@eshwar_khandre) March 23, 2025