alex Certify BIG NEWS : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪನವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಈ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ 15 ರಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ.ಪ್ರಜಾಪ್ರಭುತ್ವದ ಭಾಗವಾಗಿರುವ ಎಲ್ಲರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು. ಸೆಪ್ಟೆಂಬರ್ 15 ರಂದು ಬೆಳಗ್ಗೆ 8.30 ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಸಚಿವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...