alex Certify BIG NEWS : ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್’ ಇರಲ್ಲ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ‘ಲೋಡ್ ಶೆಡ್ಡಿಂಗ್’ ಇರಲ್ಲ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬಾಗಲಕೋಟೆ : ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಬರಗಾಲ ಬಂದಾಗಲೇ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ಹಾಗಾಗಿ ಈ ವರ್ಷ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಹೇಳಿದರು.

ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಒಂದು ವೇಳೆ ವಿದ್ಯುತ್ ಕೊರತೆ ಉಂಟಾದರೆ ಬೇರೆ ಕಡೆಯಿಂದ ವಿದ್ಯುತ್ ತರಿಸುತ್ತೇವೆ. ಈ ವರ್ಷ ಕೂಡ ಬೇಡಿಕೆ ಜಾಸ್ತಿಯಾಗಿದೆ ಎಂದರು.ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಕೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...