ನವದೆಹಲಿ : ಬಿಜೆಪಿ (ಭಾರತೀಯ ಜನತಾ ಪಕ್ಷ) ಸೇರಿ ಎಂದು ಬಿಜೆಪಿ ನಾಯಕರು ನನಗೆ ಒತ್ತಡ ಹೇರುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಬಿಜೆಪಿ ಸೇರ್ಪಡೆಯಾಗಿ ಎಂದು ನನಗೆ ಒತ್ತಡ ಇದೆ. ಹಲವು ಸಮಯದಿಂದ ಬಿಜೆಪಿ ಪಕ್ಷದಿಂದ ಒತ್ತಡ ಬರುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ, ಯಾವುದೇ ಒತ್ತಡಕ್ಕೆ ನಾವು ಬಗ್ಗುವುದಿಲ್ಲ ಎಂದು ಹೇಳಿದರು. ಕೇಜ್ರಿವಾಲ್ ಮನೆಗೆ ಪೊಲೀಸರು ಭೇಟಿ ನೀಡಿದ ಬೆನ್ನಲ್ಲೇ ಈ ಆರೋಪ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷವು ಏಳು ಎಎಪಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದೆ ಎಂಬ ಆಮ್ ಆದ್ಮಿ ಪಕ್ಷದ ಹೇಳಿಕೆಗೆ ಸಂಬಂಧಿಸಿದಂತೆ ನೋಟಿಸ್ ನೀಡಲು ದೆಹಲಿ ಪೊಲೀಸ್ ಅಪರಾಧ ವಿಭಾಗವು ನಿನ್ನೆ ಕೇಜ್ರಿವಾಲ್ ಮನೆಗೆ ಭೇಟಿ ನೋಟಿಸ್ ನೀಡಿದೆ. ಈ ಬೆನ್ನಲ್ಲೇ ಭಾನುವಾರ ಮಥುರಾ ರಸ್ತೆಯಲ್ಲಿರುವ ದೆಹಲಿ ಸಚಿವೆ ಅತಿಶಿ ಅವರ ನಿವಾಸಕ್ಕೆ ಆಗಮಿಸಿದೆ. ತಂಡವು ತನ್ನ ನಿವಾಸವನ್ನು ತಲುಪಿದಾಗ ಅತಿಶಿ ಮನೆಯಲ್ಲಿ ಇರಲಿಲ್ಲ ಎಂದು ಆರಂಭಿಕ ವರದಿಗಳು ಸೂಚಿಸಿವೆ.