ಬೆಂಗಳೂರು : ವಿಧಾನಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ ಸೇರಿದಂತೆ ಮೂರು ಮಹತ್ವದ ವಿಧೇಯಕಗಳನ್ನು ಮಂಡಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2023’ ಮಂಡನೆ ಮಾಡಿದರು.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ‘ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ 2023’ ಮಂಡನೆ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ‘ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ 2023’ ಮಂಡನೆ ಮಾಡಿದರು.
ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಕರ್ನಾಟಕ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ವಿಧೇಯಕವನ್ನು ಮಂಡಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕರ್ನಾಟಕ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ವಿಧೇಯಕವನ್ನು ಮಂಡಿಸಿದ್ದಾರೆ.
ಕರ್ನಾಟಕ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ವಿಧೇಯಕವು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ವೈದ್ಯಕೀಯ ಅಭ್ಯರ್ಥಿಗಳಿಗೆ ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲಿದೆ.