ಬೆಂಗಳೂರು : ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕ್ರಿಸ್ ಮಸ್ , ಹೊಸ ವರ್ಷಾಚರಣೆಗೆ ಬಿಗಿ ಬಂದೋಬಸ್ತ್ , ಪೊಲೀಸರಿಗೆ ಈ ನಿಯಮಗಳ ಪಾಲನೆ ಕಡ್ಡಾಯ; ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಬಂದೋಬಸ್ಗೆ ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸೂಚನೆ
• ಮಾಲ್ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು
• ಪೊಲೀಸ್ ಸಿಬ್ಬಂದಿ ಹೆಲೈಟ್ ಹಾಗೂ ಲಾಠಿಯನ್ನು ಹೊಂದಿರಬೇಕು
• ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವರ್ ಅನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು
• ಹೆಣ್ಣು ಮಕ್ಕಳನ್ನು ಚುಡಾಯಿಸುವವರು ಹಾಗೂ ದಾಂಧಲೆ ನಡೆಸುವವರನ್ನು ಕೂಡಲೇ ವಶಕ್ಕೆ ಪಡೆದುಕೊಂಡು ಕ್ರಮ ತೆಗೆದುಕೊಳ್ಳಬೇಕು
• ರಸ್ತೆ ಮೇಲೆ ಬಾಟಲಿ ಒಡೆದು ದಾ೦ಧಲೆ ನಡೆಸುವವರನ್ನು ತಕ್ಷಣವೇ ವಶಕ್ಕೆ ಪಡೆದುಕೊಳ್ಳಬೇಕು
• ಹೆಚ್ಚಿನ ಜನರು ಜಮಾವಣೆ ಆಗುವ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಿರಬೇಕು
ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಹಾಗೂ ಮಹಾತ್ಮ ಗಾಂಧಿ ರಸ್ತೆಯಲ್ಲಿ ಆಗಮನ ಹಾಗೂ ನಿರ್ಗಮನ ದ್ವಾರಗಳನ್ನು ಅಳವಡಿಸಬೇಕು.
• ಗುಪ್ತದಳ ಅಧಿಕಾರಿಗಳ ಜೊತೆಗೆ ಪೊಲೀಸ್ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿ ಇರಬೇಕು
• ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು
• ಸಣ್ಣಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು
• ಹೊಸ ವರ್ಷ ಆಚರಿಸುವವರಿಗೆ ಅಡಚಣೆ ಮಾಡದೇ ಅವರಿಗೆ ಸುರಕ್ಷತೆ ನೀಡಬೇಕು
• ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು
ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಬಂದೋಬಸ್ತ್ಗೆ ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.#Christmas #NewYear2025 @CMofKarnataka @siddaramaiah @DrParameshwara pic.twitter.com/BR1tMa0vTo
— DIPR Karnataka (@KarnatakaVarthe) December 24, 2024