alex Certify BIG NEWS : ಇಂದು ಬೆಂಗಳೂರಿನ ‘ಶಾಲಾ-ಕಾಲೇಜುಗಳಿಗೆ’ ರಜೆ ಇಲ್ಲ : ಡಿ.ಸಿ ದಯಾನಂದ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ಬೆಂಗಳೂರಿನ ‘ಶಾಲಾ-ಕಾಲೇಜುಗಳಿಗೆ’ ರಜೆ ಇಲ್ಲ : ಡಿ.ಸಿ ದಯಾನಂದ್ ಮಾಹಿತಿ

ಬೆಂಗಳೂರು : ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

ನಗರದ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ ಎನ್ನುವುದು ಖಚಿತವಾಗಿರುವ ಹಿನ್ನೆಲೆ ಶನಿವಾರ ಶಾಲೆಗಳಿಗೆ ರಜೆ ಇರುವುದಿಲ್ಲ. ಬೆಂಗಳೂರಿನ ಎಲ್ಲಾ ಶಾಲೆಗಳು ಎಂದಿನಂತೆ ನಡೆಯಲಿದೆ ಎಂದು   ಬೆಂಗಳೂರು ನಗರ ಜಿಲ್ಲಾಧಿಕಾರಿ  ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ.

60ಕ್ಕೂ ಹೆಚ್ಚು ಶಾಲೆಗಳಿಗೆ ಮೇಲ್ ಬಂದಿವೆ. ಯಾವ ರೀತಿಯ ಆತಂಕ ಪಡುವಂತಿಲ್ಲ. ನಾವು ಶಾಲೆಗೆ ರಜೆ ನೀಡಿಲ್ಲ. ಯಾವುದೇ ತುರ್ತು ಅನಿವಾರ್ಯತೆ ಇದ್ದರೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡುತ್ತದೆ ಎಂದಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆಗೆ ಸರ್ಕಾರ ಕ್ರಮ ವಹಿಸಿದೆ. ಯಾವುದೇ ಗಂಭೀರತೆ ಇಲ್ಲ, ಆದ್ದರಿಂದ ಇಂದು ಶನಿವಾರ ಶಾಲಾ-ಕಾಲೇಜಿಗಳಿಗೆ ರಜೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ಕೂಡ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...