ನವದೆಹಲಿ : ನಾಳೆ ಅಥವಾ ನಾಡಿದ್ದು ಲೋಕಸಭಾ ಚುನಾವಣೆ-2024 ದಿನಾಂಕ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿದೆ.
ಹೌದು, ಮಾರ್ಚ್ 14 ಅಥವಾ 15ರಂದು ಲೋಕಸಭಾ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಘೋಷಿಸಬಹುದು ಎಂದು ವರದಿಯಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನು ನಿರ್ಣಯಿಸಲು ಚುನಾವಣಾ ಆಯೋಗ ತಂಡವು ಬುಧವಾರದವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇರಲಿದೆ. ಅದರ ನಂತರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆ ಹಿನ್ನೆಲೆ ವಿವಿಧ ಪಕ್ಷಗಳು ತಮ್ಮ ಕಸರತ್ತು ಆರಂಭಿಸಿದೆ. ಈಗಾಗಲೇ ಬಿಜೆಪಿ , ಕಾಂಗ್ರೆಸ್ ತನ್ನ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನಕಲಿ ಸುದ್ದಿ ನಂಬಬೇಡಿ
ಲೋಕಸಭಾ ಚುನಾವಣೆಗೆ ಇನ್ನೂ ಯಾವುದೇ ದಿನಾಂಕಗಳನ್ನು ಘೋಷಿಸಲಾಗಿಲ್ಲ ಎಂದು ಚುನಾವಣಾ ಆಯೋಗ ಶುಕ್ರವಾರ ಸ್ಪಷ್ಟಪಡಿಸಿದೆ. ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸ್ಆಪ್ನಲ್ಲಿ ನಕಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ, ಇದುವರೆಗೆ ಯಾವುದೇ ದಿನಾಂಕ ಘೋಷಣೆ ಮಾಡಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ವಿವಿಧ ಪಕ್ಷಗಳು ತಮ್ಮ ಕಸರತ್ತು ಆರಂಭಿಸಿದೆ. ಈಗಾಗಲೇ ಬಿಜೆಪಿ , ಕಾಂಗ್ರೆಸ್ ತನ್ನ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ.