![](https://kannadadunia.com/wp-content/uploads/2023/05/hospital.jpg)
ಕಲಬುರಗಿ : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ಬೋರ್ಡ್ ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸಚಿವ ಡಾ.ಶರಣಪ್ರಕಾಶಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಸಚಿವ ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆಯ ವೆಚ್ಚದ ಬೋರ್ಡ್ ಗಳನ್ನು ಕಡ್ಡಾಯವಾಗಿ ಹಾಕಬೇಕು. ಇದರಿಂದ ಸುಲಿಗೆಯನ್ನು ತಪ್ಪಿಸಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ನೀಡುವ ವೆಚ್ಚದ ಕುರಿತಯು ಸರಿಯಾದ ಮಾಹಿತಿಯನ್ನು ರೋಗಿಗಳಿಗೆ ಮತ್ತು ರೋಗಿಯ ಸಂಬಂಧಿಗಳಿಗೆ ತಿಳುವಳಿಕೆ ನೀಡಿ, ತದನಂತರ ಚಿಕಿತ್ಸೆ ಆರಂಭಿಸಬೇಕು ಎಂದು ಹೇಳಿದ್ದಾರೆ.