ಬೆಂಗಳೂರು : ಬಿಜೆಪಿ ಎಂಎಲ್ ಸಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ‘ಸಿಐಡಿ’ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯರ ವಿಚಾರಣೆ ನಡೆಸಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿತ್ತು. ಅಂತೆಯೇ ಸಿಐಡಿ ಇಂದು ವಿಚಾರಣೆ ನಡೆಸಲಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ಕೇಸ್ನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ನೋಟೀಸ್ ಕೊಟ್ಟಿದ್ದರು. ಯತೀಂದ್ರ ಸಿದ್ದರಾಮಯ್ಯಗೆ ಸಿಐಡಿ ಡಿವೈಎಸ್ಪಿ ಕೇಶವಮೂರ್ತಿ ಅವರು ನೋಟಿಸ್ ಜಾರಿ ಮಾಡಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರವಾಗಿ ಸ್ಪಷ್ಟಪಡಿಸಿದ್ದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಸಿ.ಟಿ.ರವಿ ‘ಆ ಪದ’ ಬಳಸಿದ್ದು ನಿಜ. ನಾನೇ ಕೇಳಿಸಿಕೊಂಡಿದ್ದೇನೆ ಎಂದು ತಿಳಿಸಿದ್ದರು.
ಅಂದು ವಿಧಾನ ಪರಿಷತ್ ನಲ್ಲಿ ಸಿ.ಟಿ.ರವಿ, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆ ಪದ ಬಳಸಿದ್ದು ಸತ್ಯ. ನಾನೇ ಕೇಳಿಸಿಕೊಂಡಿದ್ದೇನೆ. ಸಿ.ಟಿ ರವಿ ಆಡಿದ ಮಾತು ಕೇಳಿ ನಾನೇ ಒಂದು ಕ್ಷಣ ದಂಗಾಗಿದ್ದೇನೆ. ಏನ್ ಇಂಥಾ ಪದ ಬಳಸುತ್ತಿದ್ದಾರಲ್ಲ ಎಂದುಕೊಂಡೆ. ಕೂಡಲೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬಳಿ ವಿಚಾರ ತಿಳಿಸಿದೆ ಎಂದಿದ್ದರು.