alex Certify BIG NEWS : ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸೊಸೆ, ಮೊಮ್ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನ ಪಡೆದ ಸೊಸೆ, ಮೊಮ್ಮಗ

ಬೆಂಗಳೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರಕ್ಕೆ ನೆಲಮಂಗಲದ ಡಾ.ಅಂಬೇಡ್ಕರ್ ಮೈದಾನದಲ್ಲಿ ಶನಿವಾರ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು. ಇದೀಗ ಲೀಲಾವತಿ ಅವರ ಸೊಸೆ ಹಾಗೂ ಮೊಮ್ಮಗ ಕೂಡ ಬಂದು ಲೀಲಾವತಿ ಪಾರ್ಥಿವ ಶರೀರಕ್ಕೆ ಅಂತಿನ ನಮನ ಸಲ್ಲಿಸಿದರು. ನಿನ್ನೆ ರಾತ್ರಿಯೇ ಚೆನ್ನೈನಿಂದ ಹೊರಟು ಇಂದು ನೆಲಮಂಗಲ ತಲುಪಿ ಅಂತಿಮ ನಮನ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿದು ಬಂದಿದೆ.ಸೋಲದೇವನಹಳ್ಳಿಯ ತೋಟದ ಮನೆಗೆ ಲೀಲಾವತಿಯವರ ಪಾರ್ಥಿವ ಶರೀರವನ್ನು ಕೊಂಡೊಯ್ದು, ಅಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಕುಟುಂಬಸ್ಥರು ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...