ವಾಷಿಂಗ್ಟನ್ : ರಿಪಬ್ಲಿಕನ್ ಪಕ್ಷದ ನಾಯಕ ವಿವೇಕ್ ರಾಮಸ್ವಾಮಿ ಅವರು 2024 ರ ಅಧ್ಯಕ್ಷೀಯ ಪ್ರಚಾರವನ್ನು ಸ್ಥಗಿತಗೊಳಿಸಲು ಸಜ್ಜಾಗಿದ್ದಾರೆ.
ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಅವರು 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಯೋವಾ ಕಾಕಸ್ ಗೆದ್ದ ನಂತರ 38 ವರ್ಷದ ಉದ್ಯಮಿ ಮಂಗಳವಾರ ಈ ಘೋಷಣೆ ಮಾಡಿದ್ದಾರೆ.
ಅಯೋವಾದ ಲೀಡ್ ಆಫ್ ಕಾಕಸ್ ಗಳಲ್ಲಿ ನಿರಾಶಾದಾಯಕ ಅಂತ್ಯದ ನಂತರ ತನ್ನ ಅಭಿಯಾನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ಬಯೋಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ ತಿಳಿಸಿದ್ದಾರೆ.