ಬೆಂಗಳೂರು : ವಕ್ಫ್ ವಿವಾದ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ರೈತರಿಗೆ ಕೊಟ್ಟಿರುವ ನೋಟೀಸ್ ಹಿಂಪಡೆಯಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ”. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ. ತಮ್ಮ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಇದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ. ನವೆಂಬರ್ 4ರ ಅವರ ಪ್ರತಿಭಟನೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆ ಕಡೆ ಅವರೇ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು ತಮ್ಮದೇ ಸರ್ಕಾರದ ಅವಧಿಯಲ್ಲಿ 200ಕ್ಕೂ ಹೆಚ್ಚು ರೈತರಿಗೆ ವಕ್ಫ್ ನೋಟಿಸ್ ನೀಡಿ, ಈಗ ನಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ. ವಕ್ಫ್ ನೀಡಿರುವ ನೋಟಿಸನ್ನು ಹಿಂಪಡೆಯುವಂತೆ ಸೂಚನೆ ನೀಡಿದ್ದೇನೆ. ರೈತರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದರು.