alex Certify BIG NEWS : ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ : ಕುತೂಹಲ ಮೂಡಿಸಿದ DCM ಡಿಕೆ ಶಿವಕುಮಾರ್ ಹೇಳಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ : ಕುತೂಹಲ ಮೂಡಿಸಿದ DCM ಡಿಕೆ ಶಿವಕುಮಾರ್ ಹೇಳಿಕೆ..!

ರಾಮನಗರ : ರಾಜ್ಯದ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ, ಇದಕ್ಕಾಗಿ ದೊಡ್ಡ ಪ್ರಯತ್ನ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಬಹಳ ಕುತೂಹಲಕ್ಕೆ ಕಾರಣವಾಗಿದೆ.

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ.
ಕನಕಪುರದ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಇದರ ಜೊತೆಗೆ ದೊಡ್ಡ ಹೋರಾಟ ಕೂಡ ನಡೆಯುತ್ತಿದೆ. ಈಗ ಮಾತನಾಡಿದರೆ ಇದನ್ನು ವಿವಿಧ ರೀತಿಯಲ್ಲಿ ಬಿಂಬಿಸುತ್ತಾರೆ ಎಂದರು. ಡಿಸಿಎಂ ಡಿಕೆಶಿ ಹೇಳಿಕೆ ಕುತೂಹಲ ಮೂಡಿಸಿದ್ದು, ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ರಾ ಎಂಬ ಪ್ರಶ್ನೆ ಮೂಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಾದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದು, ಕುತೂಹಲ ಮೂಡಿಸಿದೆ.

ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಖರೀದಿ

ಐಟಿ ಹಬ್ ಬೆಳ್ಳಂದೂರಿನಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಖರೀದಿಸುತ್ತಿದ್ದೇವೆ. ಜಮೀನು ಖರೀದಿ ಸಂಬಂಧ ಈಗಾಗಲೇ ರಕ್ಷಣಾ ಸಚಿವರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದೇನೆ. ಟ್ರಾಫಿಕ್ ಸಮಸ್ಯೆ ನಿವಾರಿಸಲು ರಸ್ತೆ ನಿರ್ಮಾಣಕ್ಕೆ 12 ಎಕರೆ ಜಮೀನು ಕೊಡಲು ಒಪ್ಪಿಗೆ ಕೊಟ್ಟಿದ್ದಾರೆ. ಈಜೀಪುರ ಹಾಗೂ ಬೆಳ್ಳಂದೂರು ನಡುವಿನ ರಸ್ತೆಗಾಗಿ ಟೆಂಡರ್ ಕರೆದಿದ್ದೇನೆ. ಹೀಗಾಗಿ ಲೆಫ್ಟಿನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರನ್ನು ಕರೆದು ಧನ್ಯವಾದ ಹೇಳಿದ್ದೇನೆ. ಹೆಬ್ಬಾಳ ಕಡೆಗೂ 10 ಎಕರೆ ಜಾಗ ನೀಡಿ ಅಂತ ಕೇಳಿದ್ದೇನೆ. ಒಟ್ಟು 22 ಎಕರೆ ನೀಡಿ ಎಂದು ಪ್ರಸ್ತಾವನೆ ಸಲ್ಲಿಸಿದ್ದೇವೆ. ಬೆಂಗಳೂರು ನಗರದಲ್ಲಿ ಇನ್ನೂ ತುಂಬಾ ಗುಂಡಿಗಳಿವೆ. ಅವುಗಳ ದುರಸ್ತಿ ಮಾಡುತ್ತೇವೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ.

ಇನ್ನೊಂದು ರಿವೀವ್ ಮೀಟಿಂಗ್ ಮಾಡುತ್ತೇವೆ. ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ನೂರು ವರ್ಷ ಆಗಿದೆ. ಅದಕ್ಕಾಗಿ ಈ ಬಾರಿಯ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲು ಚಿಂತಿಸಿದ್ದೇವೆ. ಮೊದಲ ಹಂತವಾಗಿ ಸ್ವಚ್ಛತಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಜಿಲ್ಲಾ, ತಾಲೂಕಿನ ಹಾಗೂ ಪಾಲಿಕೆಗಳ ಮಟ್ಟದಲ್ಲಿ ಗಾಂಧಿ ನಡಿಗೆ ಹಮ್ಮಿಕೊಂಡಿದ್ದೇವೆ. ಇದು ಒಂದು ಕಿಮೀ ನಡಿಗೆ ಇರುತ್ತದೆ. ಬೆಂಗಳೂರಿನಲ್ಲಿ ಗಾಂಧಿ ಭವನದಿಂದ ಗಾಂಧಿ ಪ್ರತಿಮೆಯವರೆಗೂ ನಡಿಗೆ ಹಮ್ಮಿಕೊಂಡಿದ್ದೇವೆ. ಪಕ್ಷ ಭೇದ ಮರೆತು ಎಲ್ಲರೂ ಇದರಲ್ಲಿ ಭಾಗಿಯಾಗಬೇಕು. ಸ್ವಚ್ಛತೆಗಾಗಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದೇ ವೇಳೆ ಸ್ವಚ್ಛತೆ ಕಾಪಾಡಲು ಪ್ರತಿಜ್ಞೆ ಹಮ್ಮಿಕೊಂಡಿದ್ದೇವೆ. ಅದಕ್ಕಾಗಿ ಆ್ಯಪ್ ಸಹ ತಯಾರು ಮಾಡುತ್ತಿದ್ದೇವೆ. ಎಲ್ಲರೂ ಕೂಡ ಇದರಲ್ಲಿ ಭಾಗಿಯಾಗಬೇಕು. ಸ್ವಚ್ಛತೆ ಬಗ್ಗೆ ನಾವು ಈ ಕಾರ್ಯಕ್ರಮ ಮಾಡುತ್ತೇವೆ. ಒಂದು ವರ್ಷ ಒಂದೊಂದು ಕಡೆ ಈ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...