alex Certify BIG NEWS : ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ :  ನಗರದ ಕೋಟನೂರು ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕರ ಸಭೆಗಾಗಿ ಆಗಮಿಸಿದ್ದ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೂಡಲೇ ಕಲಬುರ್ಗಿಗೆ ವಾಪಸ್ ಕಳುಹಿಸಿ ಈ ಪ್ರಕರಣದ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರವಾಗಿ ಅಪರಾಧಿಗಳನ್ನು ಬಂಧಿಸುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದರು.

ಸಮಾನತೆಗಾಗಿ ತಮ್ಮ ಜೀವನವನ್ನೇ ಸವೆಸಿ ಇಡೀ ದೇಶದ ಶೋಷಿತ ಸಮುದಾಯಗಳಿಗೆ ಬದುಕುವ ಹಕ್ಕನ್ನು ಕೊಟ್ಟ ಮಹಾತ್ಮನಿಗೂ ಅಪಮಾನ ಮಾಡಿದವರಿಗೆ ತಕ್ಕ ಶಿಕ್ಷೆ ನೀಡುವ ಕೆಲಸವನ್ನು ನಾವು ಖಂಡಿತ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಯಾರೂ ಕೂಡ ಉದ್ವೇಗಕ್ಕೆ ಒಳಗಾಗದೇ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ತಮ್ಮೆಲ್ಲರಿಗೂ ಕಳಕಳಿಯಿಂದ ಮನವಿ ಮಾಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...