ಬೆಂಗಳೂರು : ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿದ್ದು, ಸಿಎಂಗೆ ಸಂಕಷ್ಟ ಎದುರಾಗಿದೆ.
ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ. ಕಪ್ಪು ಚುಕ್ಕೆ”ಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ” ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ… ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ…ಎಂದು ಜೆಡಿಎಸ್ ಟ್ವೀಟ್ ಮಾಡಿದೆ.