ಬೆಂಗಳೂರು : ಬೆಂಗಳೂರಲ್ಲಿ ಸಿಸಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೊಸ ವರ್ಷಕ್ಕೆ ಮಾರಲು ತಂದಿದ್ದ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.
ರಾಮಮೂರ್ತಿ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಆಫ್ರಿಕನ್ ಪ್ರಜೆಯನ್ನು ಬಂಧಿಸಿದ್ದಾರೆ. ಈ ವೇಳೆ 21 ಕೋಟಿ ಬೆಲೆಬಾಳುವ 16 ಕೆಜಿ ಎಂಡಿಎಂಎಂ ಮತ್ತು 500 ಗ್ರಾಂ ಕೊಕೇನ್ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಎಲ್ಲಾ ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ.
ಖತರ್ನಾಕ್ ಆರೋಪಿ ಸೋಪ್, ಚಾಕ್ ಲೇಟ್ ಬಾಕ್ಸ್ ನಲ್ಲಿ ಡ್ರಗ್ಸ್ ಮಾರಾಟ ಮಾಡ್ತಿದ್ದನು ಎನ್ನಲಾಗಿದೆ. ಹೊಸ ವರ್ಷಾಚರಣೆ ನೆಪದಲ್ಲಿ ನಡೆಯುವ ಗುಂಡು, ರೇವ್ ಪಾರ್ಟಿಗಳಿಗೆ ಸಪ್ಲೈ ಮಾಡಲು ಡ್ರಗ್ಸ್ ತರಿಸಿಕೊಂಡಿದ್ದನು. ಸದ್ಯ ಈತನನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.