ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಪಾರ್ವತಿಯವರಿಗೆ ಇಡಿ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ವಾದ, ಪ್ರತಿವಾದ ಆಲಿಸಿದೆ. ಮುಂದಿನ ವಿಚಾರಣೆಯವರೆಗೆ ಇಡಿ ಸಮನ್ಸ್ ಗೆ ತಡೆ ನೀಡಲಾಗಿದ್ದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ. ಫೆಬ್ರವರಿ 10ರವರೆಗೆ ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಹೈಕೋರ್ಟ್ ಮುಂದೂಡಿದೆ.