ನವದೆಹಲಿ : ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.
ಇನ್ನರ್ ರಿಂಗ್ ರೋಡ್ (ಐಆರ್ಆರ್) ಪ್ರಕರಣ, ಅಬಕಾರಿ ನೀತಿ ಪ್ರಕರಣ ಮತ್ತು ಮರಳು ಗಣಿಗಾರಿಕೆ ಪ್ರಕರಣದಲ್ಲಿ ಈಗ ವಿರೋಧ ಪಕ್ಷದ ನಾಯಕರಾಗಿರುವ ನಾಯ್ಡು ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.