ಬೆಂಗಳೂರು : ಮಾಜಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ‘KSDL ಟೆಂಡರ್’ ಲಂಚ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಲೋಕಾಯುಕ್ತ ಪ್ರಕರಣವನ್ನು ರದ್ದುಗೊಳಿಸುವಂತೆ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕೆಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಆರೋಪದಲ್ಲಿ ಮಾಜಿ ಶಾಸಕ ಮಾಡಾಳ್ ವಿರೋಪಾಕ್ಷಪ್ಪ ಹಾಗೂ ಅವರ ಪುತ್ರರ ವಿರುದ್ಧ ಪ್ರಕರಣ ದಾಖಲಾಗಿತ್ತು, ನಂತರ ಅವರನ್ನು ಬಂಧಿಸಲಾಗಿತ್ತು. ಹಾಗೂ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದರು. ನಂತರ ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠವು ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.