ತೋಷಾಖಾನ್ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇಸ್ಲಾಮಾಬಾದ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ತೋಷಾಖಾನ್ ಪ್ರಕರಣದಲ್ಲಿ ಇಸ್ಲಾಮಾಬಾದ್ ನ್ಯಾಯಾಲಯವು ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇದೀಗ ಇಸ್ಲಾಮಾಬಾದ್ ನ್ಯಾಯಾಲಯವು ಇಮ್ರಾನ್ ಖಾನ್ ಗೆ ಬೇಲ್ ನೀಡಿ ಆದೇಶ ಹೊರಡಿಸಿದೆ.
2018ರಿಂದ 2022ರ ಮಧ್ಯೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಸರ್ಕಾರದ ಉಡುಗೊರೆಯನ್ನ ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪ ಹೊತ್ತಿದ್ದಾರೆ. ತೋಷಾಖಾನ್ ಪ್ರಕರಣದಲ್ಲಿ ಪಾಕಿಸ್ತಾನದ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇಮ್ರಾನ್ ಖಾನ್ 5 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶಿಸಿತ್ತು. 3 ವರ್ಷದ ಶಿಕ್ಷೆ ಜೊತೆಗೆ 1 ಲಕ್ಷ ದಂಡ ವಿಧಿಸಲಾಗಿತ್ತು.ಪಾಕಿಸ್ತಾನದ ಚುನಾವಣಾ ಆಯೋಗವು ಪಿಟಿಐ ಮುಖ್ಯಸ್ಥರನ್ನು “ಸುಳ್ಳು ಹೇಳಿಕೆಗಳು ಮತ್ತು ತಪ್ಪಾದ ಘೋಷಣೆ” ಗಾಗಿ ಅನರ್ಹಗೊಳಿಸಿದ ನಂತರ ತೋಷಾಖಾನಾ ವಿಷಯವು ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಅಂಶವಾಯಿತು.ತೋಶಾಸ್ಖಾನಾದಿಂದ (ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ) ಉಳಿಸಿಕೊಂಡ ಉಡುಗೊರೆಗಳ ವಿವರಗಳನ್ನು ಹಂಚಿಕೊಳ್ಳಲು ಇಮ್ರಾನ್ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಉಲ್ಲೇಖವನ್ನು ಕಳೆದ ವರ್ಷ ಆಡಳಿತಾರೂಢ ಮೈತ್ರಿಕೂಟದ ಶಾಸಕರು ಸಲ್ಲಿಸಿದ್ದರು.