ಬೆಂಗಳೂರು : ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, MLC ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಕೀಲ ದೇವರಾಜೇಗೌಡ ಎನ್ನುವರು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣರನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.