ಮೈಸೂರು : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಕಿಂಗ್ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಅಂಶವೊಂದು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಿಂಗ್ ಫಿಶರ್ ಬಿಯರ್ ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಈ ಹಿನ್ನೆಲೆ ಮೈಸೂರಿನಲ್ಲಿ 25 ಕೋಟಿ ಮೌಲ್ಯದ ಕಿಂಗ್ ಫಿಶರ್ ಬಿಯರ್ ಜಪ್ತಿ ಮಾಡsಲಾಗಿದೆ.ಈ ಬಗ್ಗೆ ಮೈಸೂರು ಗ್ರಾ. ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಮಾಹಿತಿ ನೀಡಿದ್ದು, ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ ಬಿಯರ್ ಸ್ಟ್ರಾಂಗ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.
ಯುನೈಟೆಡ್ ಬ್ರಿವರಿಸಿಸ್ ಕಂಪನಿ ತಯಾರಿಸಿದ್ದ ಬಿಯರ್ ಇದಾಗಿದೆ. 15-07-23 ರಂದು ತಯಾರಾಗಿದ್ದ ಬಿಯರ್ಗಳನ್ನು ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವೇಳೆ ಕುಡಿಯಲು ಯೋಗ್ಯವಲ್ಲದ ಅಪಾಯಕಾರಿ ಕೆಮಿಕಲ್ ಪತ್ತೆಯಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿ ರವಿಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಒಟ್ಟು 78,678 ಬಿಯರ್ ಬಾಕ್ಸ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಉತ್ತ, ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆ ಎಫ್ಐಆರ್ ದಾಖಲಾಗಿದ್ದು, ಬಿಯರ್ ಸೇಲ್ ಆಗದಂತೆ ತಡೆಹಿಡಿಯಲಾಗಿದೆ.