ಬೆಂಗಳೂರು : ವಿವಿಧ ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು, ಆದರೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ನಿರ್ಧರಿಸಿತ್ತು. ಆದರೆ ಪ್ರೀಡಂ ಪಾರ್ಕ್ ನಲ್ಲಿ ನಡೆಸಲು ಯೋಜಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಆದ್ದರಿಂದ ನಾಳೆ ಬಿಜೆಪಿ ಪ್ರತಿಭಟನೆ ನಡೆಯೋದು ಅನುಮಾನ ಎನ್ನಲಾಗಿದೆ.
ನಿನ್ನೆ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸರ್ಕಾರದ ನಡೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದರು.
ಮುಡಾ’ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ. ತನಿಖೆಯಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪ ಇರದಂತೆ ಸಿಬಿಐಗೆ ವಹಿಸಬೇಕು. ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.