alex Certify ಬಿಜೆಪಿಗೆ ಬಿಗ್ ಶಾಕ್ : `ಗೃಹಲಕ್ಷ್ಮೀ ಯೋಜನೆಗೆ ಶಾಸಕ ಎಸ್.ಟಿ. ಸೋಮಶೇಖರ್ ಭರ್ಜರಿ ಪ್ರಚಾರ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಗ್ ಶಾಕ್ : `ಗೃಹಲಕ್ಷ್ಮೀ ಯೋಜನೆಗೆ ಶಾಸಕ ಎಸ್.ಟಿ. ಸೋಮಶೇಖರ್ ಭರ್ಜರಿ ಪ್ರಚಾರ!

ಬೆಂಗಳೂರು : ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ಪ್ರಚಾರ ನೀಡಿದ್ದಾರೆ.

ಹೌದು, ಆಗಸ್ಟ್ 30 ರ ಇಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಮನೆ ಯಜಮಾನಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈ ಹೊತ್ತಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಭರ್ಜರಿ ಪ್ರಚಾರ ನೀಡುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇದುಬಿಜೆಪಿಗೆ ಶಾಕ್ ಕೊಟ್ಟಿದೆ.

ಈಗಾಗಲೇ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿನ  ಗ್ರಾಮ ಪಂಚಾಯಿತಿ ಹಾಗೂ ಬಿಬಿಎಂಪಿ ವಾರ್ಡ್‌ಗಳ ಮುಖಂಡರ ಸಭೆ ನಡೆಸಿದ ಅವರು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿದ್ದರು. ಇದೀಗ ಮುಂದುವರೆದು, ಯೋಜನೆ ಜಾರಿ ಸಂಬಂಧ ಕರಪತ್ರಗಳನ್ನು ಹಂಚಿಕೆ ಮಾಡುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...