ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ, ಬೆಳ್ಳುಳ್ಳಿ ಬೆಲೆ ದರ ಹೆಚ್ಚಳವಾಗುತ್ತಿದೆ.
ಹಬ್ಬಗಳು ಸಮೀಪಿಸುತ್ತಿರುವ ನಡುವೆ ಈರುಳ್ಳಿ ಬೆಲೆ ಕೆಜಿಗೆ 70 ರೂ ಸಮೀಪಿಸಿದ್ದು, ಬೆಳ್ಳುಳ್ಳಿ 400 ರ ಗಡಿ ದಾಟಿದೆ. ವೆಜ್ ಇರಲಿ, ನಾನ್ ವೆಜ್ ಇರಲಿ ಈರುಳ್ಳಿ, ಬೆಳ್ಳುಳ್ಳಿ ಬೇಕೇ ಬೇಕು. ತರಕಾರಿ ತರಲು ಹೋದ ಜನರು ಈರುಳ್ಳಿ, ಬೆಳ್ಳುಳ್ಳಿ ತರಲು ಹಿಂದೇಟು ಹಾಕುತ್ತಿದ್ದಾರೆ. ಗೌರಿ ಗಣೇಶ ಹಬ್ಬದ ವೇಳೆಗೆ ಇನ್ನಷ್ಟು ದರ ಹೆಚ್ಚಾಗುವ ಸಾಧ್ಯತೆಯಿದೆ.
ಧಾರಾಕಾರ ಮಳೆಯಿಂದಾಗಿ ಕೆಲವೆಡೆ ಬೆಳೆ ನಾಶವಾಗಿದ್ದರಿಂದ ಸದ್ಯ ಬೆಳ್ಳುಳ್ಳಿಯ ಬೆಲೆ ಪ್ರತಿ ಕೆ.ಜಿಗೆ 400 ರೂಪಾಯಿ ಇದೆ. ಕೊಳೆ ರೋಗ ಬಂದು ಈರುಳ್ಳಿ ಇಳುವರಿ ಕಡಿಮೆಯಾದ ಪರಿಣಾಮ ಸದ್ಯ ಬೆಲೆ ಹೆಚ್ಚು ಆಗಿದ್ದು ಕೆ.ಜಿಗೆ 60-70 ರೂಪಾಯಿ ಇದೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಇನ್ನಷ್ಟು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.
ಇದೇ ಅವಧಿಯಲ್ಲಿ ಶುಂಠಿ ಬೆಲೆ ಹಿಂದೆಂದೂ ಕಾಣದ ರೀತಿಯಲ್ಲಿ ಕೆಜಿಗೆ 80 ರೂ.ಗೆ ಏರಿಕೆಯಾಗಿದ್ದು, ಇದೀಗ ಕೆಜಿಗೆ 300 ರೂ.ಗೆ ಮಾರಾಟವಾಗುತ್ತಿದೆ.ಬಳ್ಳಾರಿ, ಕುನ್ನೂರು ಮತ್ತು ನಾಸಿಕ್ನಂತಹ ಪ್ರಮುಖ ಪ್ರದೇಶಗಳಲ್ಲಿ ಈರುಳ್ಳಿ ರೈತರ ಮೇಲೆ ತೀವ್ರ ಪರಿಣಾಮ ಬೀರಿರುವ ಅಕಾಲಿಕ ಮತ್ತು ಅತಿಯಾದ ಮಳೆಯಿಂದಾಗಿ ಕೊರತೆಯು ಪ್ರಾಥಮಿಕವಾಗಿ ಕಾರಣವಾಗಿದೆ.