alex Certify ರೈತರಿಗೆ ಬಿಗ್ ಶಾಕ್ : ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ 98 ಅಡಿಗೆ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಬಿಗ್ ಶಾಕ್ : ಮಂಡ್ಯದ ‘KRS’ ಜಲಾಶಯದ ನೀರಿನ ಮಟ್ಟ 98 ಅಡಿಗೆ ಕುಸಿತ

ಮಂಡ್ಯ : ಒಂದೆಡೆ ಕಾವೇರಿ ನೀರಿಗಾಗಿ ರೈತರು ಪ್ರತಿಭಟನೆ ಮಾಡುತ್ತಿದ್ದರೆ, ಇನ್ನೊಂದೆಡೆ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ 98 ಅಡಿಗೆ ಕುಸಿತವಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ 12 ಟಿಎಂಸಿ ನೀರು ಖಾಲಿಯಾಗಿದೆ. ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಿದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತದೆ. ಜಲಾಶಯದ ಹಿನ್ನೀರು ಪ್ರದೇಶ ಬಹುತೇಕ ಬರಡು ಭೂಮಿಯಂತಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ತಕ್ಷಣ ಸರ್ಕಾರ ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.. ಇನ್ನೂ, ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೆ.21 ಕ್ಕೆ ವಿಚಾರಣೆ ಮುಂದೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...