ಸೈಫರ್ ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಬಿಗ್ ಶಾಕ್ ಎದುರಾಗಿದ್ದು, ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.
ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನ್ಯಾಯಾಂಗ ಬಂಧನವನ್ನು ಪಾಕಿಸ್ತಾನದ ವಿಶೇಷ ನ್ಯಾಯಾಲಯ ಮಂಗಳವಾರ ಇನ್ನೂ 14 ದಿನಗಳವರೆಗೆ ವಿಸ್ತರಿಸಿದೆ.
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥರೂ ಆಗಿರುವ ಖಾನ್ ಅವರನ್ನು ಕಳೆದ ತಿಂಗಳು ವಾಶಿಂಗ್ಟೊದಲ್ಲಿನ ದೇಶದ ರಾಯಭಾರ ಕಚೇರಿ ಕಳುಹಿಸಿದ ಕೇಬಲ್ ಅನ್ನು ಬಹಿರಂಗಪಡಿಸುವ ಮೂಲಕ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪ್ರಕರಣ ದಾಖಲಾದ ನಂತರ ಬಂಧಿಸಲಾಗಿತ್ತು.
ಖಾನ್ ಅವರನ್ನು ರಿಮಾಂಡ್ ಮೇಲೆ ಜೈಲಿಗೆ ಕಳುಹಿಸುತ್ತಿರುವುದು ಇದು ಮೂರನೇ ಬಾರಿ. ಹಿಂದಿನ 14 ದಿನಗಳ ರಿಮಾಂಡ್ ಇಂದು ಕೊನೆಗೊಂಡಿತು. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಬುಲ್ ಹಸ್ನತ್ ಜುಲ್ಕರ್ನೈನ್ ಅವರು ವಿಚಾರಣೆ ನಡೆಸಿದರು. ಅಟಾಕ್ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣೆ ನಡೆಸಲಾಯಿತು.